ಮಂಗಳೂರು(ಆ, 12): ಮಂಗಳೂರು ವಿಶ್ವವಿದ್ಯಾನಿಲಯ ರಾಜ್ಯಶಾಸ್ತ್ರ ಶಿಕ್ಷಕರ ಸಂಘ ಇದರ ವಾರ್ಷಿಕ ಸಾಮಾನ್ಯ ಸಭೆ ಹಾಗೂ ನಿವೃತ್ತ ಪ್ರಾಧ್ಯಾಪಕರಿಗೆ ಸನ್ಮಾನ ಕಾರ್ಯಕ್ರಮ ಮಂಗಳೂರಿನ ಬೆಸೆಂಟ್ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಅಗಸ್ಟ್ 12ರಂದು ನಡೆಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಂಗಳೂರು ವಿ.ವಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಜಯರಾಜ್ ಅಮೀನ್ ಮಾತನಾಡಿ ಮಂಗಳೂರು ವಿ. ವಿ ರಾಜ್ಯಶಾಸ್ತ್ರ ಶಿಕ್ಷಕರ ಸಂಘದ ರಚನಾತ್ಮಕ ಕಾರ್ಯ ಚಟುವಟಿಕೆಗಳನ್ನು ಶ್ಲಾಘಿಸಿದರು. ಹಾಗೆಯೇ ನಿವೃತ್ತ ಪ್ರಾಧ್ಯಾಪಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಅರ್ಥಪೂರ್ಣ ಎಂದು ಹೇಳಿದರು.
ಮಂಗಳೂರು ವಿ. ವಿ ರಾಜ್ಯಶಾಸ್ತ್ರ ಶಿಕ್ಷಕರ ಸಂಘದ ಅಧ್ಯಕ್ಷರು ಹಾಗೂ ಮಹಾವೀರ ಕಾಲೇಜು ಮೂಡುಬಿದ್ರೆ ಇದರ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಪ್ರವೀಣ್.ಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಂಗಳೂರು ವಿ.ವಿ ರಾಜ್ಯಶಾಸ್ತ್ರ ಹಳೆ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ಕ್ಸೆವಿಯರ್ ಡಿ’ಸೋಜಾ, ಭಾರತೀಯ ಸಂವಿಧಾನ ವಿಷಯ ಮೌಲ್ಯ ಮಾಪನ ಮಂಡಳಿಯ ಅಧ್ಯಕ್ಷರಾದ ಶ್ರೀ ಸಂತೋಷ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಾಧ್ಯಾಪಕ ವೃತ್ತಿಯಿಂದ ನಿವೃತ್ತಿ ಹೊಂದಿದ ಮಂಗಳೂರು ವಿ.ವಿ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕರುಗಳಾದ ಡಾ. ಶಾನಿ, ಡಾ.ಲತಾ ಪಂಡಿತ್ ಹಾಗೂ ಡಾ. ಜಿ.ಶಂಕರ್ ಮಹಿಳಾ ಕಾಲೇಜು ಉಡುಪಿ ಇದರ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾದ ಶ್ರೀ ಅಶೋಕ್ ಭಂಡಾರಿ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ಹಾಗೆಯೇ ಭಾರತ ಮತ್ತು ಭಾರತ ಸಂವಿಧಾನ ಪಠ್ಯ ಪುಸ್ತಕ ರಚಿಸಿದ ತೆಂಕನಿಡಿಯೂರು ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾದ ಪ್ರಶಾಂತ್ ನೀಲಾವರ ಹಾಗೂ ಡಾ ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇದರ ರಾಜ್ಯಶಾಸ್ತ್ರ ಉಪನ್ಯಾಸಕರದ ಪ್ರವೀಣ್ ಮೊಗವೀರ ಗಂಗೊಳ್ಳಿ ಯವರನ್ನು ಗುರುತಿಸಿ ಗೌರವಿಸಲಾಯಿತು.
ಸಂಘದ ಕೋಶಾಧಿಕಾರಿ ಹಾಗೂ ಎಮ್. ಜಿ. ಎಮ್ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ವಿಧ್ಯನಾಥ್ ಸ್ವಾಗತಿಸಿದರು. ಸಂಘದ ಕಾರ್ಯದರ್ಶಿ ಹಾಗೂ ಕೆನರಾ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾದ ಡಾ.ಗಣೇಶ ಶೆಟ್ಟಿ ಪ್ರಾರ್ಥನೆಗೈದು ಸಂಘದ 2023-24 ರ ವಾರ್ಷಿಕ ವರದಿಯನ್ನು ವಾಚಿಸಿದರು.
ಎಸ್ ವಿ ಟಿ ಕಾಲೇಜ್ ಕಾರ್ಕಳ ಇದರ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾದ ಶ್ರೀಮತಿ ಗೀತಾ ಧನ್ಯವಾದಗೈದರು .ಶಂಕರನಾರಾಯಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾದ ಪಾಂಡುರಂಗ ಬೈಂದೂರು ನಿರೂಪಿಸಿದರು.