ಕುಂದಾಪುರ (ಆಗಸ್ಟ್ 13): ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿ ಜೀವನದಲ್ಲಿ ಗುರಿ ಬಹಳ ಮುಖ್ಯ. ಛಲ ಮತ್ತು ಗುರಿಗಳ ಸಂಯೋಗದೊಂದಿಗೆ ಗುಣಾತ್ಮಕ ಚಿಂತನೆ ಹಾಗೂ ಸಾಧನೆಯ ಸಫಲತೆಯನ್ನು ಹೆಚ್ಚಿಸುತ್ತದೆ ಎಂದು ಕೋಟ ವಿವೇಕ ವಿದ್ಯಾಸಂಸ್ಥೆಯ ಶಿಕ್ಷಕರಾಗಿರುವ ಶ್ರೀ ನರೇಂದ್ರ ಕುಮಾರ್ ಕೋಟ ಹೇಳಿದರು.
ಅವರು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಶ್ರಯದಲ್ಲಿ ನೂತನವಾಗಿ ಸೇರ್ಪಡೆಗೊಂಡ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಆಯೋಜಸಿದ ‘ಪ್ರೇರಣಾ’ ಪೂರ್ವ ಪರಿಚಯ ಕಾರ್ಯಕ್ರಮದಲ್ಲಿ “ಯಶಸ್ವಿ ವಿದ್ಯಾರ್ಥಿ ಜೀವನ” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮ ಸಂಯೋಜಿಸಿದರು. ಈ ಸಂದರ್ಭ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು.
ವ್ಯವಹಾರ ನಿರ್ವಹಣಾ ವಿಭಾಗದ ಸಹ ಪ್ರಾಧ್ಯಾಪಕರಾದ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ ಸ್ವಾಗತಿಸಿ, ಅತಿಥಿಗಳನ್ನು ಪರಿಚಯಿಸಿದರು. ವಾಣಿಜ್ಯ ವಿಭಾಗದ ಪ್ರಾಧ್ಯಾಪಕರಾದ ಶ್ರೀ ಯೋಗೀಶ್ ಶಾನುಭೋಗ ವಂದಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು.