ಕುಂದಾಪುರ(ಆ,19): ಕೆನ್-ಈ-ಮಾಬುನಿ ಶಿಟೋ-ರಿಯೋ ಕರಾಟೆ ಸ್ಕೂಲ್ ಆಫ್ ಇಂಡಿಯಾ ಉಡುಪಿ ಜಿಲ್ಲೆ ಇವರ ವತಿಯಿಂದ ಆಗಸ್ಟ್ 18 ರ ರವಿವಾರದಂದು ಥಂಡರ್ಸ್ ಗ್ರ್ಯಾಂಡ್ ಬೇ, ಸುಭಾಸ್ನಗರ, ಕುರ್ಕಾಲು ಇಲ್ಲಿ ನಡೆದ ದ್ವಿತೀಯ ರಾಷ್ಟ್ರಮಟ್ಟದ ಆಹ್ವಾನಿತ ತಂಡಗಳ ಕರಾಟೆ ಚಾಂಪಿಯನ್ಶಿಪ್ ನಲ್ಲಿ ನಮ್ಮೂರ ಪ್ರತಿಭೆಯಾದ ಮಾಸ್ಟರ್ ಶ್ರೀಶ ಗುಡ್ರಿ ಇವರು ಭಾಗವಹಿಸಿ ಕಟಾ ಮತ್ತು ಕುಮಿಟಿ ಈ ಎರಡೂ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಚಿನ್ನದ ಪದಕ ಗೆದ್ದು ಹುಟ್ಟೂರಿಗೆ ಕೀರ್ತಿ ತಂದಿರುತ್ತಾರೆ.
ಈ ಮೊದಲು ದೆಹಲಿಯಲ್ಲಿ ನಡೆದಂತಹ ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಚಿನ್ನದ ಪದಕ ಗೆದ್ದಿರುತ್ತಾರೆ.
ಕುಂದಾಪುರದ ಸಂತೋಷ್ ಮೊಗವೀರ ಮೇಲ್ ಹರ್ಜಿ ಮತ್ತು ಹೇಮಾವತಿ ಗುಡ್ರಿ ದಂಪತಿಯ ಪುತ್ರನಾದ ಶ್ರೀಶ ಗುಡ್ರಿ ಇವರು ವೆಲಾಸಿಟಿ ಅಕಾಡೆಮಿ ಆಫ್ ಮಾರ್ಷಿಯಲ್ ಆರ್ಟ್ಸ್ ಅಂಡ್ ಫಿಟ್ನೆಸ್ ಇದರ ಮುಖ್ಯಸ್ಥ ಅಕ್ಷಯ್ ಹೆಮ್ಮಾಡಿ ಇವರಲ್ಲಿ ತರಬೇತಿ ಪಡೆಯುತ್ತಿದ್ದಾರೆ.