ಕುಂದಾಪುರ (ಆ,15:) ದೇಶದ ಅಭಿವೃದ್ಧಿ ಕೇವಲ ಒಬ್ಬ ಪ್ರಧಾನಿ ಅಥವಾ ಸೇನೆಯಿಂದ ಮಾತ್ರ ಸಾಧ್ಯವಿಲ್ಲ. ಪ್ರತಿಯೊಬ್ಬ ಪ್ರಜೆ ಹಾಗೂ ವಿದ್ಯಾರ್ಥಿಗಳು ದೇಶದ ಪ್ರಗತಿಯ ಕಡೆಗೆ ಚಿಂತನೆ ಮಾಡಬೇಕು ಎಂದು ಮುಖ್ಯ ಅತಿಥಿಯಾಗಿ ಆಗಮಿಸಿದ ವಕೀಲರಾದ ಶ್ರೀ ಮಂಜುನಾಥ್ ಹೇಳಿದರು.
ಅವರು ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಗಳಲ್ಲಿ ನಡೆದ 78ನೇ ಸ್ವಾತಂತ್ರ್ಯೋತ್ಸವದಂದು ಧ್ವಜಾರೋಹಣಗೈದು ಮಾತನಾಡಿದರು.
ಇನೋರ್ವ ಮುಖ್ಯ ಅತಿಥಿ ಎನ್.ಸಿ.ಸಿ. ಕ್ಯಾಪ್ಟನ್ ಸುರೇಂದ್ರ ಶೆಟ್ಟಿ ಜಿ. ಮಾತನಾಡುತ್ತಾ, ದೇಶಪ್ರೇಮ ಎನ್ನುವುದು ಪ್ರತಿಯೊಬ್ಬ ವಿದ್ಯಾರ್ಥಿಗಳ ಹೃದಯ ಮಂದಿರದಲ್ಲಿ ಸದಾ ಪುಟಿದೇಳಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷರಾದ ಸಂಸ್ಥೆಯ ಪ್ರಾಂಶುಪಾಲೆ ಡಾ. ಚಿಂತನಾ ರಾಜೇಶ್ ಮಾತನಾಡಿ ಪ್ರತಿಯೊಂದು ಮನಸ್ಸು, ಮನೆ ಒಗ್ಗಟ್ಟಿನಿಂದ ಬೆಳಗಿದರೆ ದೇಶದ ಅಭಿವೃದ್ಧಿ ಸಾಧ್ಯ ಎಂದರು.
ವಿದ್ಯಾರ್ಥಿಗಳಿಂದ ದೇಶಭಕ್ತಿ ಮೂಡಿಸುವ ವಿವಿಧ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು. ಸಮಾರಂಭದಲ್ಲಿ ನಿವೃತ್ತ ಶಿಕ್ಷಕಿ ಶ್ರೀಮತಿ ಸುಲೋಚನ, ಎಲ್ಲಾ ವಿಭಾಗದ ಮುಖ್ಯ ಶಿಕ್ಷಕರು, ಸಹಾಯಕ ಮುಖ್ಯ ಶಿಕ್ಷಕರು, ಶಿಕ್ಷಣ ಸಂಯೋಜಕರು, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಒಂಭತ್ತನೇ ತರಗತಿಯ ಧನ್ಯಾ ಪಿ. ಆಚಾರ್ ಅತಿಥಿಗಳನ್ನು ಪರಿಚಯಿಸಿದರು. ಎಂಟನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಇಹಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.