ಕುಂದಾಪುರ(ಆ,22): ಇಲ್ಲಿನ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಜಿಲ್ಲೆಯಲ್ಲಿ ಅತೀ ಹೆಚ್ಚು ಹೆಣ್ಣು ಮಕ್ಕಳಿರುವ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ 900 ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ಪ್ಯಾಡ್ನ್ನು ರೆಡ್ ಕ್ರಾಸ್ ಸಂಸ್ಥೆ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿಯವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಶ್ರೀ ಸೀತಾರಾಮ ಶೆಟ್ಟಿ,ಸದಸ್ಯರಾದ ಶ್ರೀ ಗಣೇಶ ಆಚಾರ್ಯ, ಶ್ರೀ ಸದಾನಂದ ಶೆಟ್ಟಿ, ಶ್ರೀ ಸತ್ಯನಾರಾಯಣ ಪುರಾಣಿಕ ಹಾಗೂ ಉಪನ್ಯಾಸಕರಾದ ಕಾಳಾವರ ಶ್ರೀ ಉದಯಕುಮಾರ ಶೆಟ್ಟಿ ಉಪಸ್ಥಿತರಿದ್ದು ಕೃತಜ್ಞತೆ ಸಲ್ಲಿಸಿದರು.