ಮೊಳಹಳ್ಳಿ(ಆ,23): ಕ್ರೀಡೆಗಳು ಬದುಕಿನ ಅವಿಭಾಜ್ಯ ಅಂಗ. ಪಠ್ಯದೊಂದಿಗೆ ಕ್ರೀಡೆಯಂತಹ ಸಹಪಠ್ಯ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗಿ ಕೊಂಡಾಗ ಅವರಲ್ಲಿ ಸ್ವಯಂಶಿಸ್ತು ಬೆಳೆಯುತ್ತದೆ. ಇಂದಿನ ದಿನಗಳಲ್ಲಿ ದೇಹ ಮತ್ತು ಮನಸ್ಸು ಸದೃಢವಾಗಲು ವಿದ್ಯಾರ್ಥಿಗಳು ಆಟವಾಡುವುದನ್ನು ರೂಡಿಸಿಕೊಳ್ಳುವ ಅಗತ್ಯವಿದೆ ಎಂದು ಮೊಳಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಚಂದ್ರಶೇಖರ್ ಶೆಟ್ಟಿ ದ್ಯಾವಲ್ ಬೆಟ್ಟು ಹೇಳಿದರು.
ಅವರು ಇಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೊಳಹಳ್ಳಿಯಲ್ಲಿ ಹಾಲಾಡಿ ವೃತ್ತ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಮತಿ ವಿಶಾಲಾಕ್ಷಿ ಶೆಟ್ಟಿ ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಜಯಂತಿ ಎಂ ಶೆಟ್ಟಿ, ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಶ್ರೀಮತಿ ವಾಣಿ ಆರ್ ಶೆಟ್ಟಿ, ಹಾಲಾಡಿ ಶಿಕ್ಷಣ ಸಂಯೋಜಕರಾದ ಶ್ರೀ ಶೇಖರ್. ಯು., ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕುಂದಾಪುರ ವಲಯಾಧ್ಯಕ್ಷರಾದ ಶ್ರೀ ಗಣೇಶ್ ಕುಮಾರ್ ಶೆಟ್ಟಿ, ಕುಂದಾಪುರ ವಲಯದ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಸುಕನ್ಯ, ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಶ್ರೀ ಕಿಶನ್ ರಾಜ್ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷರಾದ ಶ್ರೀ ಬಾಲಕೃಷ್ಣ ಶೆಟ್ಟಿ, ಕುಂದಾಪುರ ವಲಯದ ಗ್ರೇಡ್-2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀಮತಿ ಉಷಾಲತಾ ಶೆಟ್ಟಿ, ಬಿದ್ಕಲ್ ಕಟ್ಟೆ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀ ನಾಗರಾಜ ಆಚಾರ್ಯ ಉಪಸ್ಥಿತರಿದ್ದರು.
ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಗೋವಿಂದ ಎಸ್ ರವರು ಸ್ವಾಗತಿಸಿದರು. ಶಿಕ್ಷಣ ಸಂಯೋಜಕರಾದ ಶೇಖರ್ ಯು ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕ ಶ್ರೀ ಗಣೇಶ ಶೆಟ್ಟಿ ಮೊಳಹಳ್ಳಿ ನಿರೂಪಿಸಿದರು. ಹಿರಿಯ ಶಿಕ್ಷಕಿ ಶ್ರೀಮತಿ ಶೋಭಾ ಸಿ ಶೆಟ್ಟಿ ವಂದಿಸಿದರು. ಶಾಲೆಯ ಸಹ ಶಿಕ್ಷಕರುಗಳಾದ ಶ್ರೀ ವೆಂಕಟ ಕುಲಾಲ್, ಶ್ರೀಮತಿ ಪ್ರೀತಿ ಬಿ ಶೆಟ್ಟಿ, ಪದವೀಧರ ಶಿಕ್ಷಕ ಶ್ರೀ ಆದರ್ಶ, ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಸುಜಾತ, ಗೌರವ ಶಿಕ್ಷಕಿ ಶ್ರೀಮತಿ ಚೇತನಾ ಶೆಟ್ಟಿ ಸಹಕರಿಸಿದರು. ಈ ಸಮಾರಂಭದಲ್ಲಿ ಶಾಲೆಯ ಎಸ್ ಡಿ ಎಂ ಸಿ ಸದಸ್ಯರು ಹಾಗೂ ಪೋಷಕರು ಹಾಜರಿದ್ದರು.
ವರದಿ : ಶ್ರೀ ಗಣೇಶ್ ಶೆಟ್ಟಿ ಮೊಳಹಳ್ಳಿ.