ಕುಂದಾಪುರ (ಆ,14): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಶ್ರಯದಲ್ಲಿ ನೂತನವಾಗಿ ಸೇರ್ಪಡೆಗೊಂಡ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಆಯೋಜಸಿದ ‘ಪ್ರೇರಣಾ’ ಪೂರ್ವ ಪರಿಚಯ ಕಾರ್ಯಕ್ರಮದಲ್ಲಿ ಹೆಬ್ರಿ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಅಮರೇಶ್ ಹೆಗ್ಡೆ ಅವರು “ಶಿಸ್ತು ಮತ್ತು ನಡವಳಿಕೆ” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.
ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮ ಸಂಯೋಜಿಸಿದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು.
ಗಣಕ ವಿಜ್ಞಾನ ವಿಭಾಗದ ಪ್ರಾಧ್ಯಾಪಕರಾದ ಶ್ರೀ ಗಿರಿರಾಜ್ ಭಟ್ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿ, ಶ್ರೀಮತಿ ಪವಿತ್ರಾ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು.