ಹೆಮ್ಮಾಡಿ (ಆ. 30): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ,ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ ಇವರ ನೇತೃತ್ವದಲ್ಲಿ ,ರಕ್ತನಿಧಿ ವಿಭಾಗ ಮಣಿಪಾಲ ಹಾಗೂ ಜಿಲ್ಲಾಡಳಿತ ಉಡುಪಿ ಇವರ ಸಹಯೋಗದೊಂದಿಗೆ, ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ(ನಿ.)ಹೆಮ್ಮಾಡಿ, ಬಗ್ವಾಡಿ ಹೋಬಳಿ ಮೊಗವೀರ ಸ್ತ್ರೀ ಶಕ್ತಿ, ಇತರೆ ಸಹಕಾರಿ ಸಂಘಗಳ ನೌಕರರ ಒಕ್ಕೂಟ(ರಿ.)ಕುಂದಾಪುರ, ಲಯನ್ಸ್ ಕ್ಲಬ್ ನಾವುಂದ, ಮಹಾವಿಷ್ಣು ಯುವಕ ಮಂಡಲ(ರಿ.) ಹರೆಗೋಡು, ಮಾನಸ ಯುವತಿ ಮಂಡಲ ಹರಗೋಡು ಇವರ ಸಹಕಾರದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ಸೆಪ್ಟೆಂಬರ್ 01ರಂದು ಹೆಮ್ಮಾಡಿಯ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ(ನಿ). ದ ಮತ್ಸ್ಯಜ್ಯೋತಿ ಸಭಾಂಗಣದಲ್ಲಿ ನಡೆಯಲಿದೆ.
ಒಂದು ಅಮೂಲ್ಯ ಜೀವ ಉಳಿಸುವ ಈ ಮಾನವೀಯ ನೆಲೆಯ ಶಿಬಿರಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಸ್ವಯಂ ಪ್ರೇರಿತ ರಕ್ತದಾನ ಮಾಡುವಂತೆ ಮೊಗವೀರ ಯುವ ಸಂಘಟನೆ(ರಿ),ಉಡುಪಿ ಜಿಲ್ಲೆ ಇದರ ಹೆಮ್ಮಾಡಿ ಘಟಕದ ಅಧ್ಯಕ್ಷರಾದ ದಿನೇಶ್ ಕಾಂಚನ್ ಬಾಳಿಕೆರೆ ವಿನಂತಿಸಿಕೊಂಡಿದ್ದಾರೆ.