ಕುಂದಾಪುರ (ಆ, 29): ಕ್ರೀಡೆ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡುತ್ತದೆ. ವಿದ್ಯಾರ್ಥಿಗಳು ಈ ವಯಸ್ಸಿನಲ್ಲಿ ದಿನಕ್ಕೆ ಒಂದು ಗಂಟೆಯಾದರೂ ಆಟದಲ್ಲಿ ತೊಡಗಿಕೊಂಡರೆ ಪಾಠವನ್ನು ಅರ್ಥೈಸಿಕೊಳ್ಳುವಲ್ಲಿ ಸಹಕಾರಿಯಾಗುತ್ತದೆ. ಮಿತವಾದ ಆಹಾರ ಪದ್ಧತಿಯೂ ಇದರಿಂದ ರೂಢಿಯಾಗುತ್ತದೆ. ಇವೆಲ್ಲವೂ ಕ್ರೀಡೆಯಿಂದ ಸಾಧ್ಯ ಎಂದು ಉಡುಪಿಯ ಪೂರ್ಣ ಪ್ರಜ್ಞಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶ್ರೀ ಸುಕುಮಾರ್ ಹೇಳಿದರು.
ಅವರು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗ ಆಯೋಜಿಸಿದ ‘ರಾಷ್ಟಿçÃಯ ಕ್ರೀಡಾ ದಿನಾಚರಣೆ’ಯನ್ನು ಉದ್ಘಾಟಿಸಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ಮೇಜರ್ ಧ್ಯಾನ್ ಚಂದ್ ಅವರ ಪರಿಶ್ರಮ ಇಂದು ಅವರ ಹೆಸರು ಮನ್ನಣೆ ಪಡೆಯಲು ಕಾರಣ. ಕ್ರೀಡೆಯಲ್ಲಿ ಸಾಧನೆ ಮಾಡಲು ಅಂತಹ ಪರಿಶ್ರಮದ ಅಗತ್ಯವಿದೆ ಎಂದರು.
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶ್ರೀ ರಂಜಿತ್ ಟಿ.ಎನ್. ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ ಅತಿಥಿಗಳನ್ನು ಪರಿಚಯಿಸಿ, ಗಣಕ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಶ್ರಿ ಶ್ರೀಕಾಂತ್ ವಂದಿಸಿದರು. ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಶ್ರೀ ಸತೀಶ್ ಶೆಟ್ಟಿ ಹೆಸ್ಕತ್ತೂರು ಕಾರ್ಯಕ್ರಮ ನಿರೂಪಿಸಿದರು.
ಈ ಸಂದರ್ಭದಲ್ಲಿ ನೆಟ್ಬಾಲ್ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡ ಕಾಲೇಜಿನ ತೃತೀಯ ಬಿಬಿಎ ವಿದ್ಯಾರ್ಥಿ ಶಶಾಂಕ್ನನ್ನು ಅಭಿನಂದಿಸಲಾಯಿತು.