ಕುಂದಾಪುರ (ಆ 20) : ಶ್ರೀ ಬಿ. ಎಂ. ಸುಕುಮಾರ ಶೆಟ್ಟಿಯವರ ಅಧ್ಯಕ್ಷತೆಯ ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಗಳ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಭಾಗವಹಿಸಿ ವಿಜೇತರಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಎಚ್. ಎಮ್. ಎಮ್. ಆಂಗ್ಲ ಪ್ರಾಥಮಿಕ ಶಾಲೆಯ 6ನೇ ತರಗತಿಯ ವೇದಿಕಾ, ವಿ. ಕೆ. ಆರ್. ಆಂಗ್ಲ ಪ್ರೌಢ ಶಾಲೆಯ 9ನೇ ತರಗತಿಯ ಶ್ರಾವ್ಯ, 8ನೇ ತರಗತಿಯ ಶ್ರೇಯಾ ಮತ್ತು ಅಂಶು ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವುದರ ಮೂಲಕ ಸಂಸ್ಥೆಗೆ ಹೆಮ್ಮೆ ತಂದಿರುತ್ತಾರೆ.
ಸಂಸ್ಥೆಯ ಪ್ರಾಂಶುಪಾಲೆ ಡಾ. ಚಿಂತನಾ ರಾಜೇಶ್ ರವರ ಮಾರ್ಗದರ್ಶನ ಮತ್ತು ದೈಹಿಕ ಶಿಕ್ಷಣ ಶಿಕ್ಷಕರಾದ ರಾಜೇಂದ್ರ ಶೆಟ್ಟಿ, ನಾಗೇಶ್ ಪ್ರಭು ಮತ್ತು ವೀರೇಂದ್ರ ನಾಯಕ್ ರವರಿಂದ ಪ್ರೇರಣೆ ಮತ್ತು ಶಿಸ್ತುಬದ್ಧ ತರಬೇತಿಯನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಸಂಸ್ಥೆಯ ಎಲ್ಲಾ ವಿಭಾಗದ ಮುಖ್ಯ ಶಿಕ್ಷಕರು, ಸಹಾಯಕ ಮುಖ್ಯ ಶಿಕ್ಷಕರು, ಶಿಕ್ಷಣ ಸಂಯೋಜಕರು ಅಭಿನಂದಿಸಿದ್ದಾರೆ.