ಕುಂದಾಪುರ( ಆ,31): ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳು ಕೋಡಿ ಕುಂದಾಪುರ ಇದರ ಆಶ್ರಯದಲ್ಲಿ ಆಗಸ್ಟ್ ,29 ರಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆ ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾದ ಆಗಮಿಸಿದ ಕುಂದಾಪುರದ ಯುವ ಸಬಲೀಕರಣ ಕ್ರೀಡಾ ಇಲಾಖೆ ಅಧಿಕಾರಿ ಶ್ರೀ ಕುಸುಮಾಕರ ಶೆಟ್ಟಿ ಗಿಡಕ್ಕೆ ನೀರು ಹಾಕಿ ಸಾಂಕೇತಿಕವಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
“ಶಿಕ್ಷಣವೇ ಜೀವನ; ಜೀವನವೇ ಶಿಕ್ಷಣ” ಕಲಿಯುವ ಮನ ಹಾಗೂ ಛಲವಿದ್ದರೆ ಶಿಕ್ಷಣವೆಂಬುದು ಎಲ್ಲೆಲ್ಲೂ ಸಿಗುತ್ತದೆ. ಆದರೆ ಆರೋಗ್ಯ ಹಾಗಲ್ಲ ಕ್ರೀಡೆಯೊಂದಿಗೆ ದೈಹಿಕವಾಗಿ ಸದೃಢರಾಗಿ ಆರೋಗ್ಯವಂತ ಭಾರತಕ್ಕಾಗಿ, ಆರೋಗ್ಯವಂತ ಯುವಜನತೆ ಸಜ್ಜುಗೊಂಡು ಎದ್ದು ನಿಲ್ಲಬೇಕು” ಎಂದು ನುಡಿದರು.
ಕ್ರೀಡಾ ಸಾಧಕ ವಿದ್ಯಾರ್ಥಿಗಳ ವಿವರವನ್ನು ದೈಹಿಕ ಶಿಕ್ಷಣ ನಿರ್ದೇಶಕ ಸೌರಭ್ ವಾಚಿಸಿ, ಮುಖ್ಯ ಅತಿಥಿಗಳು ಸಾಧಕರಿಗೆ ಸ್ಮರಣಿಕೆ ನೀಡಿ ಅಭಿನಂದಿಸಿದರು.
ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶ್ರೀ. ಸಿದ್ದಪ್ಪ ಕೆ. ಎಸ್ ಪ್ರಾಸ್ತಾವಿಕವಾಗಿ ನುಡಿದರು, ಡಿ.ಎಡ್ ಕಾಲೇಜಿನ ಪ್ರಾಂಶುಪಾಲೆ ಡಾ. ಫಿರ್ದೋಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಶಬೀನಾ.ಎಚ್. ಬ್ಯಾರೀಸ್ ಆಂಗ್ಲ ಮಾಧ್ಯಮ ಶಾಲೆ ಹಾಗೂ ಬ್ಯಾರೀಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಅಶ್ವಿನಿ ಶೆಟ್ಟಿ, ಕನ್ನಡ ಅನುದಾನಿತ ಪ್ರೌಢಶಾಲೆಯ ಹಿರಿಯ ಸಹಶಿಕ್ಷಕ ಶ್ರೀ. ಸಂತೋಷ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಹಾಜಿ ಕೆ ಮೋಹಿದ್ರಿನ್ ಬ್ಯಾರಿ ಸ್ಮಾರಕ ಕನ್ನಡ ಅನುದಾನಿತ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಮೊಹಮ್ಮದ್ ಇಲಿಯಾಸ್ ಸ್ವಾಗತಿಸಿ, ಬ್ಯಾರೀಸ್ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ವೀಣಾ ಅಗೇರ್ ವಂದಿಸಿದರು. ಕನ್ನಡ ಉಪನ್ಯಾಸಕ ಡಾ. ಸಂದೀಪ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.