ಮೂಡ್ಲಕಟ್ಟೆ (ಆ.29) : ಇಲ್ಲಿನ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಯಿತು.
ಮೇಜರ್ ಧ್ಯಾನ್ ಚಂದ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯುದರ ಮೂಲಕ ಕಾರ್ಯಕ್ರಮ ಪ್ರಾರಂಭಗೊಂಡಿತು. ಕುಂದಾಪುರದ ಪ್ರಸಿದ್ಧ ಏರೋಬಿಕ್ಸ್ ಟ್ರೈನರ್ ಶ್ರೀಮತಿ ರೇವತಿ ಡಿ. ಯವರು ವಿದ್ಯಾರ್ಥಿಗಳಿಗೆ ಏರೋಬಿಕ್ಸ್ ನ್ನು ಪ್ರಾಯೋಗಿಕವಾಗಿ ಮಾಡಿಸುವುದರ ಜೊತೆಗೆ ಅದರ ಪ್ರಯೋಜನವನ್ನು ಮತ್ತು ಸರಿಯಾಗಿ ಮಾಡುವ ಕ್ರಮಗಳನ್ನು ತಿಳಿಸಿಕೊಟ್ಟರು.
ಇದೆ ಸಂದರ್ಭದಲ್ಲಿ ಕಾರ್ಯಕ್ರಮದ ಇನ್ನೊಂದು ಭಾಗವಾಗಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. 55 ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಸ್ಪರ್ಧೆಯಲ್ಲಿ ದ್ವಿತೀಯ ಬಿಸಿಎ ವಿದ್ಯಾರ್ಥಿನಿ ಸನ್ನಿದಿ ಪ್ರಥಮ, ದ್ವಿತೀಯ ಬಿಸಿಎ ವಿದ್ಯಾರ್ಥಿನಿ ರಶೀತ ದ್ವಿತೀಯ ಹಾಗು ತೃತೀಯ ಬಿಸಿಎ ವಿದ್ಯಾರ್ಥಿನಿ ನೇತ್ರಾವತಿ ತೃತೀಯ ಸ್ಥಾನವನ್ನು ಪಡೆದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ ಪಟೇಲ್ ರವರು, ಮೇಜರ್ ಧ್ಯಾನ್ ಚಂದ್ ಅವರ ವ್ಯಕ್ತಿತ್ವ ಹಾಗೂ ಯುವ ಜನಾಂಗಕ್ಕೆ ಅವರು ನೀಡಿದ ಕೊಡುಗೆ ಮತ್ತು ಕ್ರೀಡಾ ಮನೋಭಾವದ ಮಹತ್ವವನ್ನು ತಿಳಿಸಿದರು. ಉಪ ಪ್ರಾಂಶುಪಾಲರಾದ ಶ್ರೀ ಜಯಶೀಲ್ ಕುಮಾರ್ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಪ್ರವೀಣ್ ರವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ತೃತೀಯ ಬಿಸಿಎ ವಿದ್ಯಾರ್ಥಿನಿ ಕು. ಪ್ರತಿಭಾ ನಿರೂಪಿಸಿದರು.