ಕುಂದಾಪುರ (ಸೆ.11): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ 2024-25ನೇ ಶೈಕ್ಷಣಿಕ ಸಾಲಿನ ಹದಿನಾರು ವಿವಿಧ ವೇದಿಕೆಗಳ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಸೆಪ್ಟೆಂಬರ್ 11ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು.
ತ್ರಾಸಿ ಶ್ರೀ ದುರ್ಗಾ ಕ್ಲಿನಿಕ್ನ ಡಾ| ಆತ್ರಾಡಿ ಹರಿಪ್ರಸಾದ್ ಶೆಟ್ಟಿಯವರು ಉದ್ಘಾಟಿಸಿ ವಿದ್ಯಾರ್ಥಿಗಳು ಪಠ್ಯದೊಂದಿಗೆ ಸಹಪಠ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ವಿದ್ಯಾರ್ಥಿ ದೆಸೆಯಲ್ಲಿ ಶಿಸ್ತನ್ನು ಮೈಗೂಡಿಸಿಕೊಳ್ಳುವುದರ ಮೂಲಕ ನಾಯಕತ್ವ ಗುಣಗಳನ್ನು ಬೆಳೆಸಿಕೊಂಡರೆ ಭವಿಷ್ಯದಲ್ಲಿ ಸತ್ಪçಜೆಗಳಾಗಲು ಸಾಧ್ಯ ಎಂದರು. ಇದೇ ಸಂದರ್ಭ ಯಕ್ಷಗಾನ ಭಾಗವತಿಕೆ ಮತ್ತು ಹಳೆಯ ಸಿನಿಮಾ ಹಾಡುಗಳನ್ನು ಹಾಡುವ ಮೂಲಕ ವಿದ್ಯಾರ್ಥಿಗಳನ್ನು ರಂಜಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರು ಹಾಗೂ ವಿವಿಧ ವೇದಿಕೆಗಳ ಮುಖ್ಯ ಸಂಯೋಜಕರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಾಸ್ತಾವಿಸಿದರು. ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪೂಜಾ ಕುಂದರ್ ಅತಿಥಿಗಳನ್ನು ಪರಿಚಯಿಸಿದರು. ಗಣಕ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಮೇಘ ವಂದಿಸಿದರು. ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀ ಸತೀಶ್ ಶೆಟ್ಟಿ ಹೆಸ್ಕತ್ತೂರು ನಿರೂಪಿಸಿದರು.