ಕುಂದಾಪುರ (ಸೆ,06): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಆಶ್ರಯದಲ್ಲಿ ಪರಿಸರ ಸ್ನೇಹಿ ಮಣ್ಣಿನ ಗಣಪತಿ ರಚನೆಯ ಸ್ಪರ್ಧೆಯನ್ನು ಕಾಲೇಜಿನ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ 06ರಂದು ಕಾಲೇಜಿನ ಪ್ರಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.
ಅತೀಯಾದ ರಾಸಾಯನಿಕ ಬಳಕೆ ಹಾಗೂ ಕೃತಕ ವಸ್ತುಗಳನ್ನು ಬಳಸಿ ಗಣಪತಿ ಮೂರ್ತಿಯನ್ನು ರಚಿಸುವುದು ಪರಿಸರಕ್ಕೆ ಹಾನಿಕಾರಕ ಆ ನಿಟ್ಟಿನಲ್ಲಿ ಪರಿಸರಕ್ಕೆ ಪೂರಕವಾದ ಮಣ್ಣಿನ ಗಣಪತಿಯನ್ನು ರಚಿಸುವುದು ಉತ್ತಮ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ|. ಕೆ. ಉಮೇಶ್ ಶೆಟ್ಟಿ ಹೇಳಿದರು.
ಈ ಸ್ಪರ್ಧೆಯಲ್ಲಿ ಕಾಲೇಜಿನ ದ್ವಿತೀಯ ಬಿಬಿಎ ವಿದ್ಯಾರ್ಥಿ ಪ್ರಥಮ್ ಭಂಡಾರಿ ಪ್ರಥಮ ಸ್ಥಾನ, ದ್ವಿತೀಯ ಬಿ.ಕಾಂ. ‘ಇ’ ವಿಭಾಗದ ಸುಜನ್ ದ್ವಿತೀಯ ಸ್ಥಾನ ಹಾಗೂ ದ್ವಿತೀಯ ಬಿಬಿಎ ವಿದ್ಯಾರ್ಥಿ ಸೃಜನ್ ತೃತೀಯ ಸ್ಥಾನ ಪಡೆದರು.
ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ರೋವರ್ಸ್ ಸ್ಕೌಟ್ ಲೀಡರ್ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ ಹಾಗೂ ರೇಂಜರ್ಸ್ ಲೀಡರ್ ಪೂಜಾ ಕುಂದರ್, ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಶ್ರೀ ಮಹೇಶ್ ಕುಮಾರ್, ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.