ಮೂಡ್ಲಕಟ್ಟೆ ( ಸೆ .15): ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ ಸರ್ ಎಂ ವಿಶ್ವೇಶ್ವರಯ್ಯ ರವರ ಜನ್ಮ ದಿನಾಚರಣೆಯ ಹಿನ್ನೆಲೆಯಲ್ಲಿ ಇಂಜಿನಿಯರ್ಸ್ ದಿನಾಚರಣೆಯನ್ನು ಆಯೋಜಿಸಲಾಗಿತ್ತು.
ಸರ್ ಎಂ ವಿಶ್ವೇಶ್ವರಯ್ಯ ಅವರ ಪುತ್ತಳಿಗೆ ಪುಷ್ಪಾರ್ಪಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ ಪಟೇಲ್, ಉಪ ಪ್ರಾಂಶುಪಾಲರಾದ ಶ್ರೀ ಜಯಶೀಲ ಕುಮಾರ್, ಐಟಿ ಫೋರಮ್ ಹಾಗು ಕೋಡಿಂಗ್ ಕ್ಲಬ್ ನ ಶಿಕ್ಷಕ ಹಾಗು ವಿದ್ಯಾರ್ಥಿ ಸಂಯೋಜಕರು ಉಪಸ್ಥಿತರಿದ್ದರು.