ಗಂಗೊಳ್ಳಿ ( ಸೆ.15): ಭಾಷೆ ನಮ್ಮ ನಡುವೆ ಭಾಂದವ್ಯ ಬೆಸೆಯುತ್ತದೆ. ದೇಶದ ಜನರ ಮನಸ್ಸುಗಳನ್ನು ಒಗ್ಗೂಡಿಸುವಲ್ಲಿ ಹಿಂದಿ ಭಾಷೆಯ ಪಾತ್ರ ಬಹಳ ಮಹತ್ವದ್ದಾಗಿದೆ ಎಂದು ಕುಂದಾಪುರದ ಭಂಡಾರಕರ್ಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಗೋವಿಂದ ಗೊಂಡ ಅಭಿಪ್ರಾಯಪಟ್ಟರು.
ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಮತ್ತು ರೋಟರಿ ಕ್ಲಬ್ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ನಡೆದ ಹಿಂದಿ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದರು.ಸಯ್ಯಫ್, ಸಂಜನಾ, ಲೇಖಾ, ಪ್ರಥ್ವಿ, ಝುವೈನ ಮತ್ತು ಮೆಹಕ್ ಹಿಂದಿ ಮಹತ್ವದ ಹಾಡುಗಳನ್ನು ಹಾಡಿದರು.
ಸರಸ್ವತಿ ವಿದ್ಯಾಲಯ ಪದರ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ ಸಿ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿಯ ರೋಟರಿ ಕ್ಲಬ್ ಅಧ್ಯಕ್ಷೆ ಚಂದ್ರಕಲಾ ತಾಂಡೇಲ ಶುಭ ಹಾರೈಸಿದರು. ವಿದ್ಯಾರ್ಥಿಗಳಾದ ಶಬರೀಶ ಮತ್ತು ಮರೀಹಾ ಹಿಂದಿ ದಿವಸದ ಕುರಿತು ಮಾತನಾಡಿದರು. ಹಿಂದಿ ಉಪನ್ಯಾಸಕ ನಾರಾಯಣ ಈ ನಾಯ್ಕ್ ಪ್ರಾಸ್ತಾವಿಕ ಮಾತುಗಳಾಡಿದರು. ಅಶ್ಮಿತಾ ಪ್ರಾರ್ಥಿಸಿದರು ಅಲೈನಾ ಸ್ವಾಗತಿಸಿದರು. ತನಿಷ್ಕಾ ಅತಿಥಿಗಳನ್ನು ಪರಿಚಯಿಸಿದರು. ಫಾತಿಮಾ ಕಾರ್ಯಕ್ರಮವನ್ನು ನಿರ್ವಹಿಸಿದರು. ಆನಿಯ ವಂದಿಸಿದರು.