ಕುಂದಾಪುರ, (ಸೆ. 14): ಭಾಷೆ ಕೇವಲ ಸಂವಹನ ಮಾಧ್ಯಮವಲ್ಲ, ಅದು ಸಂಸ್ಕೃತಿಯ ಪ್ರತೀಕ. ಹಿಂದಿ ಭಾಷೆ ಭಾರತೀಯ ಸಂಸ್ಕೃತಿಯ ಕೊಂಡಿಯಾಗಿದೆ. ಹೀಗಾಗಿ ಭಾಷೆ, ಸಂಸ್ಕೃತಿ- ಸಂಸ್ಕಾರವನ್ನು ಗೌರವಿಸಿ, ಅನುಸರಿಸಿ ಎಂದು ಉಡುಪಿ ಎಮ್.ಜಿ.ಎಮ್. ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥರಾದ ಶ್ರೀ ಸಂತೋಷ್ ಶೆಟ್ಟಿ ಹೇಳಿದರು.
ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗ ಆಯೋಜಿಸಿದ ‘ಹಿಂದಿ ದಿವಸ್’ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು.ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ| ದೀಪಾ ಅತಿಥಿಗಳನ್ನು ಪರಿಚಯಿಸಿದರು. ಹಿಂದಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ರೇವತಿ ಡಿ. ವಂದಿಸಿದರು. ವಿದ್ಯಾರ್ಥಿಗಳಾದ ಸುಹಾಸ್ ಮಲ್ಯ ಪ್ರಾರ್ಥಿಸಿ, ಐಶ್ವರ್ಯ ಸ್ವಾಗತಿಸಿ, ಸಿಂಚನಾ ನಿರೂಪಿಸಿದರು.