ಬೈಂದೂರು(ಸೆ,17): ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ಹಿಂದುಳಿದ ವರ್ಗಗಳ ಮೋರ್ಚ ನಾರಾಯಣ ಗುರುಗಳ 170ನೇ ಜನ್ಮದಿನಾಚರಣೆ ಅಂಗವಾಗಿ ನಾಗೂರಿನಲ್ಲಿ ಏರ್ಪಡಿಸಿದ್ದ ನಾರಾಯಣ ಗುರುಗಳ ಚಿತ್ರ ಬಿಡಿಸುವ ಸ್ಪರ್ಧೆಯ ಆರು ಮತ್ತು ಏಳನೇ ತರಗತಿಯ ವಿಭಾಗದಲ್ಲಿ ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿಯ ವಿದ್ಯಾರ್ಥಿ ಸಂಜಿತ್ ಎಮ್ ದೇವಾಡಿಗ ಪ್ರಥಮ ಸ್ಥಾನ ಗಳಿಸಿದ್ದಾರೆ.
ಇವರು ಸ್ಯಾಕ್ಸೋಫೋನ್ ಕಲಾವಿದ ಮಾದವ ದೇವಾಡಿಗ ಮತ್ತು ಉಪನ್ಯಾಸಕಿ ಸಾವಿತ್ರಿ ಎಸ್ ದಂಪತಿ ಪತ್ರ.