ಹೆಮ್ಮಾಡಿ(ಸೆ.19): ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳಿ ನಿ. ಬೆಂಗಳೂರು ಹಾಗೂ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ. ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಪದವಿಪೂರ್ವ ವಿದ್ಯಾರ್ಥಿಗಳಿಗೆ ಆಯೋಜಿಸಿದ ಜಿಲ್ಲಾ ಮಟ್ಟದ ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ಜನತಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರುತಿಕಾ ಶೆಟ್ಟಿ ಭಾಗವಹಿಸಿ,ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ.
ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.