ಗಂಗೊಳ್ಳಿ ( ಸೆ.19): ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಎಸ್.ಎನ್.ವಿ. ಪದವಿಪೂರ್ವ ಕಾಲೇಜು, ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ಕಾರ್ಕಳದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲಕ ಬಾಲಕಿಯರ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕರಾಟೆ ಪಂದ್ಯಾಟದ 52 ಕೆಜಿ ವಿಭಾಗದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮಧುರ ಪ್ರಥಮ ಸ್ಥಾನವನ್ನು ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.\
ಈಕೆ ಸುರೇಶ್ ಎಂ ತಾಂಡೇಲ ಮತ್ತು ಗಂಗೊಳ್ಳಿಯ ರೋಟರಿ ಕ್ಲಬ್ ಅಧ್ಯಕ್ಷೆ ಚಂದ್ರಕಲಾ ಎಸ್ ತಾಂಡೇಲ ದಂಪತಿ ಪುತ್ರಿ.