ಸಾಲಿಗ್ರಾಮ ( ಸೆ.19): ರಾ ಫಿಟ್ನೆಸ್ ಸಂಸ್ಥೆ ಸಾಲಿಗ್ರಾಮ ಇವರು ಸೆಪ್ಟೆಂಬರ್ 14 ರಂದು ನೆಡೆಸಿದ ಕರ್ನಾಟಕ ರಾಜ್ಯ ಬೆಂಚ್ ಪ್ರೆಸ್ ( ಪವರ್ ಲಿಫ್ಟಿಂಗ್ )ಸ್ಪರ್ಧೆಯಲ್ಲಿ ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ದ್ವಿತೀಯ ವರ್ಷದ ಬಿಸಿಎ ವಿದ್ಯಾರ್ಥಿ ಶ್ರೀ ಹರ್ಷ ಹೆಗ್ಡೆ ಯವರು ಸಬ್ ಜೂನಿಯರ್ 74 ಕೆಜಿ ವಿಭಾಗದಲ್ಲಿ ಭಾಗವಹಿಸಿ ಬೆಳ್ಳಿ ಪದಕ ವಿಜೇತರಾಗಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಯ್ಕೆ ಆಗಿದ್ದಾರೆ.
ಇವರು ಅಕ್ಟೋಬರ್ 14 ರಿಂದ 18ನೇ ವರೆಗೆ ಮಡಗಾವ್ ಗೋವಾದಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ ಸಬ್ ಜೂನಿಯರ್ ವಿಭಾಗದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.
ವಿದ್ಯಾರ್ಥಿಯ ಅಭೂತಪೂರ್ವ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ದೈಹಿಕ ನಿರ್ದೇಶಕರು ಮತ್ತು ಉಪನ್ಯಾಸಕ ವರ್ಗದವರು ಶುಭ ಹಾರೈಸಿದ್ದಾರೆ.