ಗಂಗೊಳ್ಳಿ (ಆ, 02): ಇಲ್ಲಿನ ಸರಸ್ವತಿ ವಿದ್ಯಾಲಯ ಸಮೂಹ ಸಂಸ್ಥೆಗಳಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ಅಕ್ಟೋಬರ್ 2 ರಂದು ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಕುಂದಾಪುರದ ಡಾ .ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಉಪನ್ಯಾಸಕರಾದ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ ಯವರು ಮಾತನಾಡಿ ಗಾಂಧೀಜಿ ಮತ್ತು ಶಾಸ್ತ್ರಿಜಿ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಅವರಿಬ್ಬರ ವ್ಯಕ್ತಿತ್ವ ಜಗತ್ತಿಗೆ ಮಾದರಿಯಾಗುವುದರ ಜೊತೆಗೆ ಯುವ ಸಮುದಾಯ ಸ್ಪೂರ್ತಿ ಎಂದು ಹೇಳಿದರು. ಯುವ ಸಮುದಾಯ ಸ್ವಾತಂತ್ರ್ಯ ಹೋರಾಟಗಾರರನ್ನು ಹಾಗೂ ರಾಷ್ಟ್ರೀಯ ನಾಯಕರನ್ನು ಗೌರವಿಸುವ ಮನೋಭಾವ ಹೊಂದಿರಬೇಕೆ ಹೊರತು ಟೀಕಿಸುವ ಹಾಗೂ ದ್ವೇಷಿಸುವ ಮನೋಭಾವವನ್ನು ಹೊಂದಬಾರದು. ದ್ವೇಷಿಸುವುದು ಭಾರತೀಯ ಸಂಸ್ಕೃತಿಯಲ್ಲ ಎಂದು ಹೇಳಿದರು.
ಎಸ್ ವಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಕವಿತಾ ಎಮ್. ಸಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಎಸ್ ವಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ರಾಘವೇಂದ್ರ ಶೇರುಗರ್, ಸ್ಕೌಟ್ ಹಾಗೂ ಗೈಡ್ಸ್ ಶಿಕ್ಷಕಿ ಲಾವಣ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾಲೇಜಿನ ಎನ್ಎಸ್ಎಸ್ ಯೋಜನಾಧಿಕಾರಿ ಶ್ರೀಮತಿ ಸುಗುಣ ಸ್ವಾಗತಿಸಿದರು. ವಾಣಿಜ್ಯ ಉಪನ್ಯಾಸಕಿ ಅಕ್ಷಯ ಅತಿಥಿಗಳನ್ನು ಪರಿಚಯಿಸಿದರು. ಪ್ರೌಢಶಾಲಾ ವಿಭಾಗದ ಉಪ ಪ್ರಾಂಶುಪಾಲರಾದ ಶ್ರೀ ಗೋಪಾಲ್ ದೇವಾಡಿಗ ರವರು ವಂದಿಸಿದರು.
ಸಂಖ್ಯಾ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಪ್ರಫುಲ್ಲ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ಹಮ್ಮಿಕೊಳ್ಳಲಾಯಿತು.