ಕಾರ್ಕಳ ( ಆ .03): ಶಾಲಾ ಶಿಕ್ಷಣ ಇಲಾಖೆ , ಕರ್ನಾಟಕ ಸರ್ಕಾರ ಮತ್ತು ಮರಿಯಾ ಗೊರಟ್ಟಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಿರ್ಗಾನ ಇವರ ಜಂಟಿ ಆಶ್ರಯದಲ್ಲಿ ನಡೆದ ಕಾರ್ಕಳ ವಲಯ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿಗಳಾದ ಪ್ರತ್ಯುಶ್ ಶೆಟ್ಟಿ 200 ಮೀ. ಓಟದಲ್ಲಿ ಪ್ರಥಮ ಸ್ಥಾನ, 100ಮೀ.ಓಟದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಶ್ರವಣ್ 200 ಮೀ. ಓಟದಲ್ಲಿದ್ವಿತೀಯ ಸ್ಥಾನ ಪಡೆದಿರುತ್ತಾರೆ. ಅದಿತಿ 200 ಮೀ. ಓಟದಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.
ವಿಜೇತರನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.