ಕಿರಿಮಂಜೇಶ್ವರ (ಅ,05): ಕಾರ್ಕಳದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ವಿದ್ಯಾರ್ಥಿನಿ ಸಾನಿಧ್ಯ ಎಸ್ ಮೊಗವೀರ ತೃತೀಯ ಸ್ಥಾನ ಗಳಿಸಿ ಉಡುಪಿ ಜಿಲ್ಲೆಗೆ ಹಾಗೆಯೇ ಜನತಾ ವಿದ್ಯಾಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾಳೆ.
ವಿದ್ಯಾರ್ಥಿಯ ಈ ಸಾಧನೆಗೆ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿ, ಬೋಧಕ ಮತ್ತು ಬೋಧಕೇತರ ವರ್ಗದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.