ಕಾರ್ಕಳ ( ಆ,08): ಶ್ರೀಮದ್ ಭುವನೇಂದ್ರ ಪ್ರೌಢಶಾಲೆ ಕಾರ್ಕಳ ಇವರ ಆಶ್ರಯದಲ್ಲಿ ನಡೆದ 2024ನೇ ಸಾಲಿನ ಮೈಸೂರು ವಿಭಾಗೀಯ ಮಟ್ಟದ 17 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದ ರಿದಮಿಕ್ ಯೋಗಾಸನ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಅನ್ವಿ ಹೆಚ್. ಅಂಚನ್ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ಇವರು ಕಾರ್ಕಳದ ಶ್ರೀ ಹರೀಶ್ ಹಾಗೂ ಶ್ರೀಮತಿ ಶೋಭಾ ದಂಪತಿಯ ಸುಪುತ್ರಿಯಾಗಿರುತ್ತಾರೆ. ವಿಜೇತರನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.