ಕುಂದಾಪುರ (ಅ. 29): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಸ್ಟಾರ್ ಹೆಲ್ತ್ ಸಂಸ್ಥೆಯ ವತಿಯಿಂದ ಆರೋಗ್ಯ ವಿಮೆಯ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸ್ಟಾರ್ ಹೆಲ್ತ್ನ ಟ್ರೈನಿಂಗ್ ಮ್ಯಾನೇಜರ್ ಆಗಿರುವ ಶ್ರೀ ಸಂತೋಷ್ರವರು ಆರೋಗ್ಯ ವಿಮೆ ಹಾಗೂ ಲಭ್ಯವಿರುವ ವಿವಿಧ ಪಾಲಿಸಿಗಳ ಕುರಿತು ಮಾಹಿತಿ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಅಧ್ಯಕ್ಷತೆಯನ್ನು ವಹಿಸಿದ್ದರು. ಸ್ಟಾರ್ ಹೆಲ್ತ್ನ ಸದಸ್ಯರುಗಳಾದ ಭರತ್ ತಿಂಗಳಾಯ, ಅಕ್ಷಯ್, ವೀರೇಂದ್ರ ದೇವಾಡಿಗ, ಕಾಲೇಜಿನ ಎಲ್ಲಾ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ವಾಣಿಜ್ಯ ಉಪನ್ಯಾಸಕ ಕಿಶೋರ್ ಕೃಷ್ಣ ಮರಕಾಲ ಕಾರ್ಯಕ್ರಮ ನಿರ್ವಹಿಸಿದರು.