ಕುಂದಾಪುರ: ವಿದ್ಯಾರ್ಥಿಗಳು ಬದುಕಿನ ಸವಾಲುಗಳನ್ನು ಸಮಚಿತ್ತದಿಂದ ಎದುರಿಸಬೇಕು. ಸಿ.ಎ. ಹಾಗೂ ಸಿ.ಎಸ್. ಕೋರ್ಸುಗಳ ಜೊತೆಗೆ ತಮ್ಮ ಬಿ.ಕಾಂ ವ್ಯಾಸಂಗವನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸಿದ್ದಲ್ಲಿ ಮುಂದಿನ ಶೈಕ್ಷಣಿಕ ಗುರಿಯನ್ನು ಯಶಸ್ವಿಯಾಗಿ ತಲುಪಬಹುದು ಎಂದು ಕಾಮತ್ & ಕೋ ಚಾರ್ಟರ್ಡ್ ಅಕೌಂಟೆಂಟ್ ಉಡುಪಿ ಇದರ ಪಾಲುದಾರರಾದ ಎಮ್ ಶ್ರೀಧರ್ ಕಾಮತ್ ಹೇಳಿದರು.
ಅವರು ಕಾಲೇಜಿನ 2020-21 ನೇ ಸಾಲಿನಲ್ಲಿ ನೂತನವಾಗಿ ಪ್ರಾರಂಭಿಸಿರುವ ಬಿ.ಕಾಂ ಪ್ರೋಫೆಷನಲ್ (ಸಿ.ಎ. & ಸಿ.ಎಸ್.) ಕೋರ್ಸುಗಳನ್ನು ಉದ್ಘಾಟಿಸಿ ಮಾತನಾಡಿದರು. ಕುಂದಾಪುರ ಎಜುಕೇಶನ್ ಸೊಸೈಟಿ (ರಿ) ಇದರ ಕಾರ್ಯದರ್ಶಿಗಳಾದ ಶ್ರೀ.ಕೆ. ಸೀತಾರಾಮ ನಕ್ಕತ್ತಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾಲೇಜಿನ ಪ್ರಾಂಶುಪಾಲ ಪ್ರೋ. ಕೆ. ಉಮೇಶ್ ಶೆಟ್ಟಿ,ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ, ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ (SPACE) ಕುಂದಾಪುರದ ನಿರ್ದೇಶಕರಾದ ಭರತ್ ಶೆಟ್ಟಿ ಹಾಗೂ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ವೀಣಾ ಭಟ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ರಾಜೇಶ್ ಶೆಟ್ಟಿ ವಂದಿಸಿದರು, ಸಂತೋಷ್. ಎ. ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು.