ಕೋಡಿ( ನ,16): ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜು ಕೋಡಿ, ಇಲ್ಲಿ 2024-25 ನೇ ಸಾಲಿನ ರಕ್ಷಕ-ಶಿಕ್ಷಕ ಸಭೆ ನವೆಂಬರ್ ,16 ರಂದು ಜರುಗಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸರಕಾರಿ ಪದವಿ ಪೂರ್ವ ಕಾಲೇಜು ಕೋಟೇಶ್ವರ ಇದರ ಪ್ರಾಂಶುಪಾಲರಾದ ಪ್ರೊ. ಪ್ರಕಾಶ್ಚಂದ್ರ ಶೆಟ್ಟಿ ಇವರು ಸಸಿಗೆ ನೀರುಣಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ವಿದ್ಯಾರ್ಥಿ ಪೋಷಕರನ್ನುದ್ದೇಶಿಸಿ “ಮಾನವ ಜನ್ಮ ಶ್ರೇಷ್ಠತಮವಾದುದು ವಿಜ್ಞಾನವನ್ನು ವರವಾಗಿ ಬಳಸಿ ದೇಶದ ಆಸ್ತಿಯಾಗಬೇಕು. ಪೋಷಕರು ತಮ್ಮ ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಮಕ್ಕಳನ್ನೇ ದೇಶದ ಆಸ್ತಿಯನ್ನಾಗಿಸಬೇಕು: ಮಕ್ಕಳು ಆತ್ಮವಿಶ್ವಾಸದೊಂದಿಗೆ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು” ಎಂದು ನುಡಿದರು.
ಪದವಿ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಶಬೀನಾ ಹೆಚ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಹಾಜಿ ಕೆ.ಎಂ ಅಬ್ದುಲ್ ರೆಹಮಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಣಕಶಾಸ್ತ್ರ ವಿಭಾಗದ ಮುಖ್ಯಸ್ಥೆ ಶ್ರೀಮತಿ ನೂತನ್ ಹಾಗೂ ವಾಣಿಜ್ಯ ಉಪನ್ಯಾಸಕ ನಾಗರಾಜ್ ವಿವಿಧ ಪದವಿ ಹಾಗೂ ಉದ್ಯೋಗಾವಕಾಶಗಳ ಕುರಿತು ಮಾಹಿತಿ ನೀಡಿದರು.
ವಿದ್ಯಾರ್ಥಿಗಳಲ್ಲಿ ಇಂಗ್ಲೀಷ್ ಮಾತನಾಡುವ ಹಿನ್ನೆಲಯಲ್ಲಿ ವಿಶೇಷ ಇಂಗ್ಲೀಷ್ ಸಂವಹನ ತರಗತಿ ತೆಗೆದುಕೊಳ್ಳುವ ಕುರಿತು ಆಂಗ್ಲ ಉಪನ್ಯಾಸಕಿ ಶ್ರೀಮತಿ ಪ್ರಿಯಾ ರೇಗೊ ಮಾಹಿತಿ ನೀಡಿದರು. ಕನ್ನಡ ಉಪನ್ಯಾಸಕ ಸಂದೀಪ್ ಶೆಟ್ಟಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.