ಕೊಲ್ಲೂರು( ನ .16) : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಕೊಲ್ಲೂರು ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 22 ಹಾಗೂ 23 ರಂದು ಕಾಲೇಜಿನ ಕ್ರೀಡಾಂಗಣದಲ್ಲಿ ಪದವಿಪೂರ್ವ ವಿದ್ಯಾರ್ಥಿಗಳ ಬಾಲಕ – ಬಾಲಕಿಯರ ರಾಜ್ಯ ಮಟ್ಟದ ಹೊನಲು ಬೆಳಕಿನ ನೆಟ್ ಬಾಲ್ ಪಂದ್ಯಾಟ 2024-25 ನಡೆಯಲಿದೆ.
ನವೆಂಬರ್ 22 ರ ಮಧ್ಯಾಹ್ನ 03ಗಂಟಗೆ ಕೊಲ್ಲೂರಿನ ಲಲಿತಾಂಬಿಕಾ ಅತಿಥಿ ಗೃಹದಿಂದ ಪುರ ಮೆರವಣಿಗೆ ನಡೆಯಲಿದೆ. ಕೊಲ್ಲೂರು ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಹೆಗ್ಡೆ ಅವರು ಪುರ ಮೆರವಣಿಗೆ ಚಾಲನೆ ನೀಡಲಿದ್ದಾರೆ. ಸಂಜೆ 4.00ಗಂಟೆಗೆ ಕೊಲ್ಲೂರು ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಹೊನಲು ಬೆಳಕಿನ ಕಾಲೇಜು ವಿದ್ಯಾರ್ಥಿಗಳ ನೆಟ್ ಬಾಲ್ ಪಂದ್ಯಾಟವನ್ನು ಉಡುಪಿ ಜಿಲ್ಲಾ ಉಸ್ತುವಾರಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉದ್ಘಾಟಿಸಲಿದ್ದಾರೆ.
ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಕೊಲ್ಲೂರು ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಹೆಗ್ಡೆ ಅವರು ಧ್ವಜಾರೋಹಣಗೈಯಲಿದ್ದಾರೆ.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ ರಾಘವೇಂದ್ರ, ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶ್ಪಾಲ್ ಎ ಸುವರ್ಣ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್ ಭೋಜೇ ಗೌಡ, ಮಂಜುನಾಥ ಭಂಡಾರಿ, ಡಾ. ಧನಂಜಯ ಸರ್ಜಿ, ಕಿಶೋರ್ ಕುಮಾರ್, ಕೊಲ್ಲೂರು ಗ್ರಾ.ಪಂ ಉಪಾಧ್ಯಕ್ಷ ನಾಗೇಶ್ ದಳಿ, ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸತ್ಯವತಿ, ಉಡುಪಿ ಜಿಲ್ಲಾಧಿಕಾರಿ ಡಾ ಕೆ. ವಿದ್ಯಾಕುಮಾರಿ, ಉಡುಪಿ ಜಿ.ಪಂ. ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್, ಬೈಂದೂರ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಉಪಸ್ಥಿತರಿರಲಿದ್ದಾರೆ.
ಹಾಗೆಯೇ ಕೊಲ್ಲೂರು ಮೂಕಾಂಬಿಕಾ ಪ್ರೌಢಶಾಲಾ ನಿವೃತ್ತ ಮುಖ್ಯೋಪಾಧ್ಯಾಯ ಬಿ. ಕರುಣಾಕರ ಶೆಟ್ಟಿ, ಕೊಲ್ಲೂರು ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ನಿತ್ಯಾನಂದ ಅಡಿಗ, ಮಹಾಲಿಂಗ ನಾಯ್ಕ್, ಧನಾಕ್ಷಿ ವಿಶ್ವನಾಥ, ಸುಧಾ.ಕೆ, ಅಭಿಷಾಲ್ ಪಿ.ವಿ, ಯು ರಾಜೇಶ್ ಕಾರಂತ್, ರಘುರಾಮ್ ದೇವಾಡಿಗ ಆಲೂರು, ಪ್ರಾಕ್ತನ ವಿದ್ಯಾರ್ಥಿ, ಕಾಮನ್ ವೆಲ್ತ್ ಪದಕ ವಿಜೇತ ಗುರುರಾಜ್ ಪೂಜಾರಿ ಜೆಡ್ಡು, ಕೊಲ್ಲೂರು ದೇವಳದ ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಶಾಲಾ ಶಿಕ್ಷಣ (ಪದವಿ ಪೂರ್ವ) ಉಪನಿರ್ದೇಶಕ ಮಾರುತಿ, ಉ ಕ್ರೀಡಾ ಸಂಯೋಜಕ ದಿನೇಶ್ ಕುಮಾರ್ ಎ, ಬೆಂಗಳೂರು ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ನಿರ್ದೇಶಕಿ ಸಿಂಧು ರೂಪೇಶ್, ಬೆಂಗಳೂರು ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಕ್ರೀಡೆ ಸಹಾಯಕ ನಿರ್ದೇಶಕ ಗುಬ್ಬಿಗೂಡು ರಮೇಶ್ ಭಾಗವಹಿಸಲಿದ್ದಾರೆ.
ನವೆಂಬರ್ 23 ರ ಸಂಜೆ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಕೊಲ್ಲೂರು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ ಬಾಬು ಹೆಗ್ಡೆ ಅಧ್ಯಕ್ಷತೆ ವಹಿಸಿಲಿದ್ದಾರೆ. ಕೊಲ್ಲೂರು ದೇವಳದ ಕಾರ್ಯನಿರ್ವಹಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಬಹುಮಾನ ವಿತರಣೆ ಮಾಡಲಿದ್ದಾರೆ. ಕೊಲ್ಲೂರು ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎಸ್. ಅರುಣ್ ಪ್ರಕಾಶ್ ಶೆಟ್ಟಿ, ಕೊಲ್ಲೂರು ದೇವಳದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಕೆ. ರಮೇಶ್ ಗಾಣಿಗ, ಉಡುಪಿ ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ವರ್ಗೀಸ್ , ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪ್ರಾಂಶುಪಾಲರ ಸಂಘದ ಅಧ್ಯಕ್ಷ ದಿನೇಶ್ ಎಂ. ಕೊಡವೂರು, ದೈಹಿಕ ಶಿಕ್ಷಣ ಅಧಿಕಾರಿ ಚಂದ್ರಶೇಖರ್ ಶೆಟ್ಟಿ, ದ.ಕ ಜಿಲ್ಲೆ ದೈಹಿಕ ಶಿಕ್ಷಣ ಉಪನ್ಯಾಸಕ ಸಂಘ ಅಧ್ಯಕ್ಷ ಪ್ರೇಮನಾಥ ಶೆಟ್ಟಿ, ಉಡುಪಿ ಜಿಲ್ಲೆ ದೈಹಿಕ ಶಿಕ್ಷಣ ಉಪನ್ಯಾಸಕ ಸಂಘ ಅಧ್ಯಕ್ಷ ಸತೀಶ್ ಹೆಗ್ಡೆ, ಪ್ರಾಕ್ತನ ವಿದ್ಯಾರ್ಥಿ, ರಾಷ್ಟ ಮಟ್ಟದ ವೈಟ್ ಲಿಫ್ಟರ್ ಹಾಗೂ ನೆಟ್ ಬಾಲ್ ಕ್ರೀಡಾಪಟು ಮಂಜುನಾಥ ಮರಾಠಿ ಭಾಗವಹಿಸಿದ್ದಾರೆ ಎಂದು ಕೊಲ್ಲೂರು ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಗೋಪಾಲಕೃಷ್ಣ ಜಿ.ಬಿ ಹಾಗೂ ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ್ ಶೆಟ್ಟಿ ಹೊಸಮಠ ಪ್ರಕಟಣೆ ತಿಳಿಸಿದ್ದಾರೆ.