ಕುಂದಾಪುರ(ನ.25) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್, ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ಅವನಿ.ಎ. ಶೆಟ್ಟಿಗಾರ್, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಕಾರದೊಂದಿಗೆ “ಜ್ಞಾನ ವರ್ಷಿಣಿ”/ “ಜ್ಞಾನ ದರ್ಶಿನಿ” ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನದ ಆಧಾರ ಜರುಗಿದ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ, ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.
ವಿಜೇತ ವಿದ್ಯಾರ್ಥಿನಿಯನ್ನು ಸಂಸ್ಥೆಯ ಪ್ರಾಂಶುಪಾಲರು ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ಅಭಿನಂದಿಸಿದರು.