ಕುಂದಾಪುರ (ನ. 26): ಸಂವಿಧಾನ ದೇಶದ ಸರ್ವಶ್ರೇಷ್ಟ ಕಾನೂನಾಗಿದ್ದು ಇಡೀ ದೇಶದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ. ಯುವ ಸಮುದಾಯ ಸಂವಿಧಾನದ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಹಕ್ಕುಗಳನ್ನು ಋಣಾತ್ಮಕವಾಗಿ ಬಳಸಿಕೊಳ್ಳದೆ ಧನಾತ್ಮಕವಾಗಿ ಬಳಸಿಕೊಂಡು ಸತ್ಪ್ರಜೆಗಳಾಗಬೇಕು ಒಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಹೇಳಿದರು.
ಅವರು ಕಾಲೇಜಿನ ಎನ್ ಎಸ್ ಎಸ್ ಘಟಕ ಹಾಗೂ ರೋವರ್ಸ & ರೇಂಜರ್ಸ್ ಘಟಕಗಳ ಆಶ್ರಯದಲ್ಲಿ ನವೆಂಬರ್ 26 ರಂದು ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಸಹ ಪ್ರಾಧ್ಯಾಪಕರಾದ ಪ್ರವೀಣ್ ಮೊಗವೀರ ಗಂಗೊಳ್ಳಿ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು.
ಕಾಲೇಜಿನ ವಾಣಿಜ್ಯ ವಿಭಾಗದ ಸಹ ಪ್ರಾಧ್ಯಾಪಕರಾದ ರಾಜೇಶ್ ಶೆಟ್ಟಿ ವಕ್ವಾಡಿ, ಜೋಸ್ಲಿನ್ ಅರ್. ಅಲ್ಮೆಡಾ, ಪ್ಲೇಸ್ಮೆಂಟ್ ಆಫೀಸರ್ ಸುರೇಶ ಕಾಮತ್, ಕಛೇರಿ ಸಿಬ್ಬಂದಿ ರಮೇಶ್ ಮೊಗವೀರ ಉಪಸ್ಥಿತರಿದ್ದರು.
ರೇಂಜರ್ಸ್ ಘಟಕದ ಸಂಯೋಜಕರಾದ ಪೂಜಾ ಕುಂದರ್ ವಂದಿಸಿದರು.ಕಾಲೇಜಿನ ಎನ್ಎಸ್ಎಸ್ ಘಟಕ-2 ಸಂಯೋಜಕರಾದ ದೀಪಾ ಪೂಜಾರಿ ನಿರೂಪಿಸಿದರು.