ಹೆಮ್ಮಾಡಿ ( ನ .25): ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಕ್ರಮವಾಗಿ, ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಶ್ರುತಿಕಾ ಶೆಟ್ಟಿ ಕನ್ನಡ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಜಯಶ್ರೀ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗ ಭಾವಗೀತೆ ಪ್ರಥಮ ಸ್ಥಾನ, ನಿಶಾಂತ್ ಕಿಣಿ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗ ಭಕ್ತಿಗೀತೆ ದ್ವಿತೀಯ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಸಾಧಕ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ/ಪ್ರಾಂಶುಪಾಲರು/ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.