ಕಾರ್ಕಳ( ನ .26): ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಜ್ಞಾನ ಸಂಭ್ರಮ ಇತ್ತೀಚೆಗೆ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಮತ್ತು ಉಪ ಪ್ರಾಂಶುಪಾಲರಾದ ಡಾ. ಬಾಲಿಕಾ ಮಾತನಾಡುತ್ತಾ ನಮ್ಮನ್ನು ಉನ್ನತ ಸ್ಥಾನದಲ್ಲಿ ನಿಲ್ಲಿಸುವವರು ಗುರುಗಳು, ಗುರುಗಳು ನಮ್ಮನ್ನು ಉತ್ತಮ ದಾರಿಯಲ್ಲಿ ಕರೆದೊಯ್ಯುತ್ತಾರೆ, ನಮ್ಮ ಗುರಿ ತಲುಪಲು ನೆರವಾಗುತ್ತಾರೆ ಎಂದರು. ನನ್ನನ್ನು ನಾನು ಕಾಪಾಡಿಕೊಳ್ಳುವುದು ಹೇಗೆ ಎಂದು ತಿಳಿದುಕೊಳ್ಳಬೇಕು, ಆತ್ಮವನ್ನು ಎಷ್ಟು ಚೆನ್ನಾಗಿ ಇಟ್ಟುಕೊಳ್ಳತ್ತೇವೆ ಎನ್ನುವುದು ಮುಖ್ಯ, ವಿದ್ಯೆ ಕಲಿಯುವ ಉದ್ದೇಶ ಭರತ ಭೂಮಿಯನ್ನು ವಿಶ್ವಗುರು ಎಂದು ಕರೆಸಿಕೊಳ್ಳುವುದ್ದಕ್ಕೆ. ನನ್ನನ್ನು ನಾನು ದೇಶಕ್ಕೆ ಅರ್ಪಿಸುತ್ತೇನೆ ಎಂದು ತಿಳಿದುಕೊಳ್ಳಬೇಕು, ಜ್ಞಾನಸುಧಾ ಮೌಲ್ಯಸುಧಾವಾಗಿ ಬೆಳೆಯುತ್ತಿದೆ ಎಂದು ಹೇಳಿದರು.
ವಾರ್ಷಿಕ ವರದಿಯನ್ನು ರಸಾಯನ ಶಾಸ್ತ್ರ ಉಪನ್ಯಾಸಕಿಯಾದ ಕುಮಾರಿ ಪೂಜಾ ಸುವರ್ಣ ವಾಚಿಸಿದರು. ಮುಖ್ಯ ಅತಿಥಿಯಾಗಿದ್ದ ಎಂ.ಸಿ.ಎಫ್. ಮಂಗಳೂರಿನ ಜಾಯಿಂಟ್ ಜನರಲ್ ಮ್ಯಾನೇಜರ್ ಅಗಿರುವ ಕೆ. ಬಿ. ಕೀರ್ತನ್ ಕುಮಾರ್ ಅವರು ಹದಿಹರೆಯದ ಮಕ್ಕಳ ಮನಸ್ಸಿನಲ್ಲಿ ಗೊಂದಲ ಇರುವಾಗ ಅವರಿಗೆ ಸರಿಯಾದ ಮಾರ್ಗದರ್ಶನವನ್ನು ಮಾಡಬೇಕು ಆಗ ಮಕ್ಕಳು ಸರ್ವತೋಮುಖ ಬೆಳವಣಿಗೆ ಹೊಂದುತ್ತಾರೆ ಎಂದರು. ವಿದ್ಯಾರ್ಥಿಗಳು ಸಮಾಜಕ್ಕೆ ಉತ್ತಮ ಕೊಡುಗೆ ನೀಡುವಂತಾಗಲಿ, ಮಕ್ಕಳು ಮೊಬೈಲ್ ಬಳಕೆಯನ್ನು ಒಳ್ಳೆಯದಕ್ಕೆ ಮಾತ್ರ ಉಪಯೋಗಿಸಿ, ಸಮಾಜಕ್ಕೆ ಆಸ್ತಿಯಾಗಬೇಕು ಎಂದರು.
ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದಿನೇಶ್ ಎಂ. ಕೊಡವೂರು, ಪ್ರಾಂಶುಪಾಲರಾದ ವಾಣಿ.ಕೆ, ಶಾಲಾ ವಿದ್ಯಾರ್ಥಿ ನಾಯಕ ದೈವಿಕ್, ಉಪ ನಾಯಕಿ ಅಶ್ನಿ ಕೋಟ್ಯಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ, ಟ್ರಸ್ಟಿಗಳಾದ ಶ್ರೀಮತಿ ವಿದ್ಯಾವತಿ ಎಸ್ ಶೆಟ್ಟಿ ಮತ್ತು ನಿತ್ಯಾನಂದ ಪ್ರಭು, ಹಿತೈಷಿಗಳಾದ ತ್ರಿವಿಕ್ರಮ ಕಿಣಿ ಮತ್ತು ದೇವೇಂದ್ರ ನಾಯಕ್, ಸಾರ್ವಜನಿಕ ಸಂಪರ್ಕಾಧಿüಕಾರಿ ಜ್ಯೋತಿ ಪದ್ಮನಾಭ ಭಂಡಿ, ಕಾಲೇಜಿನ ಉಪ ಪ್ರಾಂಶುಪಾಲರಾದ ಸಾಹಿತ್ಯ ಹಾಗೂ ಉಷಾ ರಾವ್ ಯು, ಅಕಾಡೆಮಿಕ್ ಅಡೈಸರ್ ಶಾರದಾ ಅಂಬರೀಶ್ ಉಪಸ್ಥಿತರಿದ್ದರು.
ಕಲಿಕೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಹಾಗೂ ವಾರ್ಷಿಕೋತ್ಸವದ ಅಂಗವಾಗಿ ನಡೆಸಲಾದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿದ್ಯಾರ್ಥಿಗಳಿಂದ ಮನರಂಜನಾ ಕಾರ್ಯಕ್ರಮಗಳು ನಡೆದವು. ವಿದ್ಯಾರ್ಥಿನಿ ಆರಾಧ್ಯ ಪ್ರಾರ್ಥಿಸಿ, ಉಪ ಪ್ರಾಂಶುಪಾಲರಾದ ವಾಣಿ. ಕೆ ಸ್ವಾಗತಿಸಿ, ಆಂಗ್ಲ ಭಾಷಾ ಉಪನ್ಯಾಸಕಿ ದರ್ಶಿನಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.