ಕುಂದಾಪುರ(ನ.26) : ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಶಾಲೆಗಳ ಪ್ರಾಥಮಿಕ ವಿಭಾಗದ ನಾಲ್ಕನೇ ತರಗತಿಯ ವಿದ್ಯಾರ್ಥಿ ಆದ್ವಿಕ್ ಆರ್ ಶೆಟ್ಟಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರದ ವತಿಯಿಂದ ನಡೆದ ಕುಂದಾಪುರ ವಲಯ ಮಟ್ಟದ ಪ್ರತಿಭಾ ಕಾರಂಜಿ 2024-25 ರ ಕಿರಿಯ ಹಂತದ ವೈಯಕ್ತಿಕ ವಿಭಾಗದ ಚಿತ್ರಕಲೆ ಮತ್ತು ಬಣ್ಣ ಹಚ್ಚುವ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿಜೇತ ವಿದ್ಯಾರ್ಥಿಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು ಅಭಿನಂದಿಸಿದರು.