ಗಂಗೊಳ್ಳಿ( ನ ,26): ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ನಿವೃತ್ತ ಇತಿಹಾಸ ಉಪನ್ಯಾಸಕ ಮತ್ತು ಉತ್ತಮ ಕೃಷಿಕರು ಆಗಿರುವ ಹೊಸಾಡು ಭಾಸ್ಕರ ಶೆಟ್ಟಿ ಇವರಿಗೆ ಗಂಗೊಳ್ಳಿಯ ಸ್ನೇಹಿತರ ಬಳಗದಿಂದ ಅಭಿಮಾನದ ಸನ್ಮಾನ ಕಾರ್ಯಕ್ರಮವು ಗಂಗೊಳ್ಳಿಯ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನಮೆಂಬರ್ 28ರ ಗುರುವಾರ ಸಂಜೆ ನಡೆಯಲಿದೆ.
ಜಿ ಎಸ್ ವಿ ಎಸ್ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ಕಾಶಿನಾಥ್ ಪಿ ಪೈ ಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದು , ಕುಂದಾಪುರದ ಚಿನ್ಮಯಿ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ. ಉಮೇಶ್ ಪುತ್ರನ್, ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಮಾಜಿ ಪ್ರಾಂಶುಪಾಲ ಕೆ ಎನ್ ಟಿ ನಂಬಿಯಾರ್, ಉಡುಪಿಯ ಖ್ಯಾತ ವಕೀಲರಾದ ಹೆಚ್ ರಾಘವೇಂದ್ರ ಶೆಟ್ಟಿ, ಸಮಾಜ ಸೇವಕಿ ಮಂಜುಳ ದೇವಾಡಿಗ ಮತ್ತು ಖ್ಯಾತ ಉದ್ಯಮಿ ಇಮ್ತಿಯಾಜ್ ಖಲೀಫೆ ಇವರು ಪಾಲ್ಗೊಳ್ಳಲಿದ್ದಾರೆ.