ಕುಂದಾಪುರ (ನ. 27): ಬ್ಯಾರಿಸ್ ಪ್ರಥಮ ದರ್ಜೆ ಕಾಲೇಜು ಕೋಡಿ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಸಂವಿಧಾನ ದಿನವನ್ನು ನವೆಂಬರ್,26ರಂದು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಶಬೀನಾ. ಎಚ್. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ದೇಶ ಸುವ್ಯವಸಿತವಾಗಿ ಅಭಿವೃದ್ಧಿಯತ್ತ ಸಾಗುವಲ್ಲಿ ಹಾಗೂ ಸಮಾಜದಲ್ಲಿ ಸಮಾನತೆಯನ್ನು ಸಾಧಿಸುವಲ್ಲಿ ಸಂವಿಧಾನದ ಪಾತ್ರ ಮಹತ್ವದ್ದಾಗಿದೆ, ಭಾರತೀಯ ಸಂವಿಧಾನ ಜಗತ್ತಿನ ಅತಿ ದೊಡ್ಡ ಸಂವಿಧಾನವಾಗಿದ್ದು ಇತರ ದೇಶಗಳಿಗೆ ಮಾದರಿಯಾಗಿದೆ ಎಂದು ನುಡಿದು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಭೋದಿಸಿದರು.
ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ಪೂರ್ಣಿಮಾ ಶೆಟ್ಟಿ, ಎನ್ ಎಸ್ ಎಸ್ ಸಹ ಸಂಯೋಜನಾಧಿಕಾರಿ ಶ್ರೀಮತಿ ನೂತನ ಎಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎನ್ಎಸ್ಎಸ್ ಸಂಯೋಜನಾಧಿಕಾರಿ ಸರ್ವರನ್ನು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.