ಕುಂದಾಪುರ( ನ .27): ಏಷ್ಯನೆಟ್ ಸುವರ್ಣ ಹಾಗೂ ಕನ್ನಡ ಪ್ರಭ ಪತ್ರಿಕೆಯವರು ಕೊಡಮಾಡುವ ಅಂತರಾಷ್ಟ್ರೀಯ ಮಟ್ಟದ ಪ್ರಶಸ್ತಿಗೆ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾಗಿರುವ ಶ್ರೀ ಗಣೇಶ ಮೊಗವೀರರವರು ಆಯ್ಕೆಯಾಗಿದ್ದಾರೆ.
ಶ್ರೀಯುತರು ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ವಿಶೇಷ ಕೊಡುಗೆಗಳನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ನವೆಂಬರ್ ,28 ರಂದು ವಿಯೆಟ್ನಾಂ ನಲ್ಲಿ ನಡೆಯಲಿರುವ ಅದ್ದೂರಿಯ ಸಮಾರಂಭದಲ್ಲಿ ಗಣ್ಯಾತಿಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.