ಪಣಜಿ(ಡಿ, 05): ಗೋವಾ ಬಂಟರ ಸಂಘದ ವತಿಯಿಂದ 2025 ರ ಜನವರಿ 19ರಂದು ನಡೆಯಲಿರುವ ರಜತ ಸಂಭ್ರಮ ಕಾರ್ಯಕ್ರಮದ ಲಾಂಛನ ಬಿಡುಗಡೆ ಡಿಸೆಂಬರ್ 01 ರಂದು ನಡೆದ ಸಂಘದ ವಾರ್ಷಿಕ ಕ್ರೀಡಾಕೂಟದಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ಕಾವಡಿ ಸದಾಶಿವ ಶೆಟ್ಟಿ ಅನಾವರಣ ಮಾಡಿದರು.
ಗೋವಾ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀ ಸುನಿಲ್ ಶೆಟ್ಟಿ ಬೆಳ್ಳಂಪಳ್ಳಿ, ಕೋಶಾಧಿಕಾರಿ ಶ್ರೀ ಪ್ರಶಾಂತ್ ಶೆಟ್ಟಿ, ಸಂಘದ ಉಪಾಧ್ಯಕ್ಷರಾದ ಶ್ರೀ ವಿಜಯೇಂದ್ರ ಶೆಟ್ಟಿ ಕಬ್ಯಾಡಿ, ಶ್ರೀ ಜಗದೀಶ್ ಶೆಟ್ಟಿ ಪಳ್ಳಿ, ಜೊತೆ ಕಾರ್ಯದರ್ಶಿ ಶ್ರೀ ರಾಘವ ಶೆಟ್ಟಿ ಕೊಡ್ಲಾಡಿ, ನಿಕಟ ಪೂರ್ವ ಅಧ್ಯಕ್ಷರಾದ ಶಶಿಧರ ನಾಯ್ಕ್ , ಸಂಘದ ಮಾಜಿ ಉಪಾಧ್ಯಕ್ಷರಾದ ಶ್ರೀ ಸುಬ್ರಮಣ್ಯ ಶೆಟ್ಟಿ, ಶ್ರೀ ಶಶಿಧರ ರೈ, ಮಾಜಿ ಕಾರ್ಯದರ್ಶಿ ಶ್ರೀ ಗಣೇಶ ಶೆಟ್ಟಿ ಹಾಗೂ ಸಂಘದ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.