ಹೆಮ್ಮಾಡಿ (ಡಿ,016): ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ [ರಿ.] ಅಂಬಲಪಾಡಿ, ಉಡುಪಿ ಮತ್ತು ಮೊಗವೀರ ಯುವ ಸಂಘಟನೆ [ರಿ.] ಉಡುಪಿ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ಮಾಹೆ- ಮಣಿಪಾಲ ಇವರ ಸಹಯೋಗದೊಂದಿಗೆ ಅತ್ಯುತ್ತಮ ಸೌಲಭ್ಯಗಳನ್ನು ಹೊಂದಿರುವ ಆಕರ್ಷಕ ಯೋಜನೆಯಾದ ಜಿ. ಶಂಕರ್ ಮಣಿಪಾಲ ಆರೋಗ್ಯ ಸುರಕ್ಷಾ ಯೋಜನೆಯ ನವೀಕರಣ ಹಾಗೂ ನೋಂದಾವಣೆ ಅಭಿಯಾನ ಡಿಸೆಂಬರ್ 17 ರಿಂದ ಜನವರಿ 10 ರ ತನಕ ಹೆಮ್ಮಾಡಿಯ ಬಸ್ ನಿಲ್ದಾಣ ದ ಸಮೀಪದ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಕಟ್ಟಡದಲ್ಲಿರುವ ಬ್ಲೂ ಸ್ಕೈ ಸ್ಟುಡಿಯೋದಲ್ಲಿ ನಡೆಯಲಿದೆ.
ಯಾವುದೇ ಜಾತಿ ಮತ ಧರ್ಮ ಬೇಧ ಭಾವ ಇಲ್ಲದೆ ಜಿ.ಶಂಕರ್ ಮಣಿಪಾಲ್ ಆರೋಗ್ಯ ಕಾರ್ಡ್ ನ್ನು ಸಾರ್ವಜನಿಕರು ನೋಂದಣಿ ಮಾಡಿಕೊಂಡು ಆರೋಗ್ಯ ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದೆ.
ಸಾರ್ವಜನಿಕರು ಈ ಆರೋಗ್ಯ ಕಾರ್ಡನ್ನು ಹೆಮ್ಮಾಡಿ ಬಸ್ ನಿಲ್ದಾಣ ದ ಸಮೀಪದ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಕಟ್ಟಡದಲ್ಲಿರುವ ಬ್ಲೂ ಸೈ ಸ್ಟುಡಿಯೋದಲ್ಲಿ ನೋಂದಣಿ ಮಾಡಿಕೊಳ್ಳಲು ಮೊಗವೀರ ಯುವ ಸಂಘಟನೆ [ರಿ.] ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕದ ಅಧ್ಯಕ್ಷರಾದ ಶ್ರೀ ದಿನೇಶ್ ಕಾಂಚನ್ ಬಾಳಿಕೆರೆ ತಿಳಿಸಿದ್ದಾರೆ.
ಆರೋಗ್ಯ ಸುರಕ್ಷಾ ಕಾರ್ಡ್ ಮಾಡಿಸಲು ಬೇಕಾಗುವ ದಾಖಲೆಗಳು
ರೇಷನ್ ಕಾರ್ಡ್ ಜೆರಾಕ್ಸ್
ಕುಟುಂಬದ ಪ್ರತಿ ಸದಸ್ಯರ ಆಧಾರ್ ಕಾರ್ಡ್ ವಿವರ
ರೂ.1700 ರೂಪಾಯಿ