ಕಾರ್ಕಳ (ಜ.6): ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಉಪ ನಿರ್ದೇಶಕರ ಕಛೇರಿ ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬ್ರಹ್ಮಾವರ ತಾಲೂಕು ಸಹಭಾಗಿತ್ವದಲ್ಲಿ ಶ್ರೀ ರಾಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಬೈದೆಬೆಟ್ಟು – ಕೊಕ್ಕರ್ಣೆ ಇವರ ಸಂಘಟನಾ ಸಾರಥ್ಯದೊಂದಿಗೆ ನಡೆದ ೨೦೨೪-೨೫ನೇ ಸಾಲಿನ ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಶಾಲೆ ಹಾಗೂ ಪ್ರೌಢಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ಸಾನ್ವಿ ಎಸ್. ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಹಾಗೂ 10ನೇ ತರಗತಿಯ ವಿದ್ಯಾರ್ಥಿನಿ ಅಶ್ನಿ ಕೋಟ್ಯಾನ್ ಭರತನಾಟ್ಯದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.
ಇವರನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.