ಕುಂದಾಪುರ(ಜ.08): ಶ್ರೀ ರಾಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಬೈದೆ ಬೆಟ್ಟು ಕೊಕ್ಕರ್ಣೆ, ದುರ್ಗಾ ಆಂಗ್ಲ ಮಾಧ್ಯಮ ಶಾಲೆ ಕೊಕ್ಕರ್ಣೆ ಇಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಚಿತ್ರಕಲೆಯಲ್ಲಿ ಕೊಂಚಾಡಿ ರಾಧಾ ಶೆಣೈ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿಯ ವಿದ್ಯಾರ್ಥಿ ಸಂಜಿತ್ ಎಂ ದೇವಾಡಿಗ ದ್ವಿತೀಯ ಸ್ಥಾನ ಪಡೆದಿರುತ್ತಾನೆ.
ಈತ ಚಿತ್ರಕಲಾ ಶಿಕ್ಷಕ, ಸ್ಯಾಕ್ಸೋಫೋನ್ ಕಲಾವಿದ ಮಾಧವ ದೇವಾಡಿಗ ಹಾಗೂ ಗಣಿತ ಉಪನ್ಯಾಸಕಿ ಸಾವಿತ್ರಿ ಎಸ್ ದೇವಾಡಿಗ ಗಂಗೊಳ್ಳಿಯವರ ಸುಪುತ್ರ.