ಕುಂದಾಪುರ(ಜ.15): ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಆಯೋಜನೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಸಹಯೋಗದಲ್ಲಿ ಜನವರಿ 10 ರಂದು ಸರಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ‘ಅರಿವಿನ ಬೆಳಕು -ಉಪನ್ಯಾಸ ಮಾಲೆ’ ಕಾರ್ಯಕ್ರಮ ನಡೆಯಿತು.
ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ ಯವರು ಕಾರ್ಯಕ್ರಮ ಉದ್ಘಾಟಿಸಿದರು.
ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಇದರ ಅಧ್ಯಕ್ಷರಾದ ಡಾ. ಗಣನಾಥ ಶೆಟ್ಟಿ ಎಕ್ಕಾರು ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಇದರ ಸದಸ್ಯ ಸಂಚಾಲಕರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು.ಡಾ. ಭಾರತಿ ಮರವಂತೆಯವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಂಪನ್ಮೂಲ ವ್ಯಕ್ತಿಗಳಾದ ಆಗಮಿಸಿದ ಸರ್ಕಾರಿ ಪದವಿ ಪೂರ್ವಕಾಲೇಜು ಕೋಟೇಶ್ವರ ಇದರ ಕನ್ನಡ ಉಪನ್ಯಾಸಕರಾದ ಡಾ.ಸುಧಾಕರ ದೇವಾಡಿಗ ಬಿ. ರವರು “ಶಿವರಾಮ ಕಾರಂತರ ಬರಹಗಳು : ವೈಚಾರಿಕ ಪ್ರಜ್ಞೆ” ಕುರಿತು ಉಪನ್ಯಾಸವನ್ನು ನೀಡಿದರು.
ಡಾ. ಶಿವರಾಮ ಕಾರಂತ ಟ್ರಸ್ಟ್ ಸದಸ್ಯರಾದ ಸತೀಶ್ ಕೊಡವೂರು, ಡಾ ಪ್ರಸಾದ್ ರಾವ್, ಜಿ ಎಂ ಶರೀಫ್ ಹೂಡೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕಿ ಶ್ರೀಮತಿ ಜ್ಯೋತಿ ಶೆಟ್ಟಿ ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ಕನ್ನಡ ಉಪನ್ಯಾಸಕರಾದ
ಶ್ರೀ ಶಂಕರ ನಾಯ್ಕ ಧನ್ಯವಾದಗೈದರು. ಕನ್ನಡ ಉಪನ್ಯಾಸಕ ಶ್ರೀ ಉದಯ ಕುಮಾರ ಶೆಟ್ಟಿ ಕಾಳಾವರ ಕಾರ್ಯಕ್ರಮ ನಿರೂಪಿಸಿದರು.