ಕುಂದಾಪುರ (ಜ.10): ಇನ್ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟೆಂಟ್ ಆಫ್ ಇಂಡಿಯಾ ನಡೆಸುವ ಪ್ರಾರಂಭಿಕ ಹಂತದ CMA ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಹಂತದಲ್ಲಿಯೇ ಉತ್ಕೃಷ್ಟ ಸಾಧನೆಗೈದಿದ್ದಾರೆ.
ವೈಷ್ಣವಿ ಹಾಗೂ ಕಾರ್ತಿಕ್ ಕೆ. ಬಿಲ್ಲವ ಇವರು ಸಿ.ಎಂ.ಎ. ಇಂಟರ್ಮೀಡಿಯೇಟ್ ಪ್ರೋಗ್ರಾಮ್ಗೆ ಅರ್ಹತೆ ಪಡೆದಿದ್ದಾರೆ. ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವೀ ರೀಚ್ ಸಂಸ್ಥೆಯ ನುರಿತ ತರಬೇತುದಾರರಿಂದ ವಿದ್ಯಾರ್ಥಿಗಳು ತರಬೇತಿ ಹಾಗೂ ಮಾರ್ಗದರ್ಶನ ಪಡೆದು ಈ ಸಾಧನೆಗೈದಿದ್ದಾರೆ.
ಇವರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.