ಕುಂದಾಪುರ( ಜ.15): ಇಲ್ಲಿನ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಶಾಲೆಯ ಟೀಚರ್ ಎಜುಕೇಶನ್ ವಿಭಾಗದಲ್ಲಿ ಎರಡನೇ ಬ್ಯಾಚ್ ಗೆ ಒಂದು ವರ್ಷದ ಅವಧಿಯ ಮೊಂಟೆಸ್ಸರಿ / ನರ್ಸರಿ ಟೀಚರ್ ಟ್ರೈನಿಂಗ್ ಹಾಗೂ ಕೌನ್ಸ್ ಲಿಂಗ್ ಅಂಡ್ ಗೈಡೆನ್ಸ್ ಡಿಪ್ಲೋಮಾ ಕೋರ್ಸ್ ಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಬಿಎಸ್ಎಸ್ ವೃತ್ತಿಪರ ಶಿಕ್ಷಣ ಆಶ್ರಯದಲ್ಲಿ ನಡೆಸಲ್ಪಡುವ ಈ ಕೋರ್ಸ್ ಗಳಿಗೆ ಎರಡನೇ ವರ್ಷಕ್ಕೆ ಪ್ರವೇಶಾತಿ ಆರಂಭವಾಗಿದ್ದು, ಟೀಚರ್ ಟ್ರೈನಿಂಗ್ ತರಬೇತಿಗೆ ಪಿಯುಸಿ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಹಾಗೂ ಕೌನ್ಸಿಲಿಂಗ್ ಕೋರ್ಸ್ ಗೆ ಶಿಕ್ಷಕ ವೃತ್ತಿಯಲ್ಲಿರುವವರು ಅಥವಾ ಇತರರು ಸಂಪರ್ಕಿಸಬಹುದಾಗಿದೆ.
ಆಸಕ್ತರು ಅರ್ಜಿ ನಮೂನೆಯನ್ನು ಕುಂದೇಶ್ವರ ದೇವಸ್ಥಾನ ಸಮೀಪ ಅಥವಾ ಬಸ್ರೂರು ಮೂರ್ಕೈ ಕಛೇರಿಯಿಂದ ಪಡೆದು ಭರ್ತಿ ಮಾಡಿ (7975861619) ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.