ಕುಂದಾಪುರ(ಜ.17): ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲ ಮತ್ತು ನಿರಂತರ ಅಭ್ಯಾಸವಿದ್ದರೆ ಜೀವನದ ನಿರ್ದಿಷ್ಟ ಗುರಿಮುಟ್ಟಲು ಸಾಧ್ಯ ಎಂಬುದನ್ನು ಸಾಧಕರ ಹಿಂದಿರುವ ಸೋಲಿನ ಕತೆಯನ್ನು ಹೇಳುತ್ತಾ ಹತ್ತನೇ ತರಗತಿಯ ಬಳಿಕ ವಿದ್ಯಾರ್ಥಿಗಳು ಯಾವುದೆಲ್ಲ ವೃತ್ತಿಪರ ವಿಷಯಗಳನ್ನು ಆಯ್ದುಕೊಳ್ಳಬೇಕು ಎಂಬ ವಿಚಾರಗಳ ಬಗ್ಗೆ ಮಣಿಪಾಲ ಡಾಟ್ ನೆಟ್ ಪ್ರೈವೆಟ್ ಲಿಮಿಟೆಡ್ ನ ನಿರ್ದೇಶಕರಾದ ಶ್ರೀ ನಾಗರಾಜ ಕಟೀಲ್ ತಿಳಿಸಿಕೊಟ್ಟರು.
ಅವರು ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್.ಎಮ್. ಎಮ್. ಮತ್ತು ವಿ. ಕೆ. ಆರ್. ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಆಯೋಜಿಸಿದ ವೃತ್ತಿ ಮಾರ್ಗದರ್ಶನ ಕಾರ್ಯಾಗಾರದಲ್ಲಿ ಮಾತನಾಡಿದರು.
ಪ್ರಾಂಶುಪಾಲೆ ಡಾ. ಚಿಂತನಾ ರಾಜೇಶ್ ರವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಗಾರದಲ್ಲಿ ಉಪಪ್ರಾಂಶುಪಾಲೆ ಮತ್ತು ಪ್ರೌಢ ಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶುಭಾ ಕೆ. ಎನ್. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕರಾದ ಸುರೇಂದ್ರ ಶೆಟ್ಟಿ ಜಿ. ಕಾರ್ಯಕ್ರಮ ನಿರೂಪಿಸಿ ವಂದಿಸಿದರು.