ಕುಂದಾಪುರ(ಜ.21): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಗಳ 9ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಶ್ರಾವ್ಯ ಎ. ಪಿ. ಇವಳು ಕಶ್ವಿ ಚೆಸ್ ಸ್ಕೂಲ್ ಕುಂದಾಪುರ ಇವರು ಆಯೋಜಿಸಿದ ಯುವ ಆಲ್ ಇಂಡಿಯಾ ಫ್ಲಡ್ ಲೈಟ್ – 2025ರ ಒಪನ್ ರಾಪಿಡ್ ಚೆಸ್ ಟೂರ್ನಮೆಂಟ್ ನ 15ರ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾಳೆ.
ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು ಅಭಿನಂದಿಸಿದರು.