ಆಲೂರು ( ಜ.28): ಇಲ್ಲಿನ *ಸರಕಾರಿ ಪ್ರೌಢಶಾಲೆಯ ಶಿಕ್ಷಕರಾದ ಉದಯ ಕುಮಾರ ಶೆಟ್ಟಿಯವರು ರಾಜ್ಯಮಟ್ಟದ ಅತ್ಯುತ್ತಮ ಮತದಾರ ಸಾಕ್ಷರತಾ ಕ್ಲಬ್ ಸಂಚಾಲಕ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.
ಬೆಂಗಳೂರಿನ ಟೌನ್ ಹಾಲ್ ನಲ್ಲಿ ನೆಡೆದ ಕಾರ್ಯಕ್ರಮದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರವರು ಉದಯ ಕುಮಾರ ಶೆಟ್ಟಿಯವರನ್ನು ಗೌರವಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಚುನಾವಣಾಧಿಕಾರಿಗಳಾದ ಮನೋಜ್ ಕುಮಾರ ಮೀನಾ,ಬಿ.ಬಿ.ಎಂ.ಪಿ ಆಯುಕ್ತರಾದ ತುಷಾರ ಗಿರಿನಾಥ್ ಉಪಸ್ಥಿತರಿದ್ದರು.