ಹೆಮ್ಮಾಡಿ (ಜ. 27): ಇಲ್ಲಿನ ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಸಾಮಾನ್ಯ ಸ್ಥಾನಕ್ಕೆ ಜ.26ರಂದು ನಡೆದ ಚುನಾವಣೆಯಲ್ಲಿ ಲೋಹಿತಾಶ್ವ ಆರ್ ಕುಂದರ್ ಬಾಳಿಕೆರೆ ಗೆಲುವು ಸಾಧಿಸಿ, ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.
ಸಮಾಜ ಸೇವೆ, ಸಹಕಾರ ಹಾಗೂ ಧಾರ್ಮಿಕ ಕ್ಷೇತ್ರದಲ್ಲೂ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿರುವ ಇವರು ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಪ್ರಸ್ತುತ ಗೌರವಾಧ್ಯಕ್ಷರಾಗಿದ್ದಾರೆ. ಹಾಗೆಯೇ ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲಾ ಘಟಕದ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ, ಮೊಗವೀರ ಮಹಾಜನ ಸೇವಾ ಸಂಘ ಮುಂಬೈ ಬಗ್ವಾಡಿ ಹೋಬಳಿ ಸದಸ್ಯರಾಗಿದ್ದು ವಿವಿಧ ಸಂಘ -ಸಂಸ್ಥೆಗಳ ಸಕ್ರಿಯ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದಾರೆ.