ಮಂಗಳೂರು(ಫೆ,1 ): ಟಿವಿ ಚಾನೆಲ್ ಕಲರ್ಸ್ ಕನ್ನಡವು ಎರಡು ಹೊಸ ರಿಯಾಲಿಟಿ ಶೋಗಳನ್ನು ಪ್ರಾರಂಭಿಸುತ್ತಿದೆ. ‘ಬಾಯ್ಸ್ v/s ಗರ್ಲ್ಸ್’ ಎಂಬ ಗೇಮ್ ಶೋ ಮತ್ತು ಕಚಗುಳಿಯಿಟ್ಟು ನಗಿಸುವ ‘ಮಜಾ ಟಾಕೀಸ್’ ಶೋಗಳು ಫೆಬ್ರವರಿ .1ರಿಂದ ಪ್ರಸಾರ ಆರಂಭಿಸಲಿವೆ.
ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 7:30ಕ್ಕೆ ‘ಬಾಯ್ಸ್ ವಿ/ಎಸ್ ಗರ್ಲ್ಸ್’ ಹಾಗೂ ರಾತ್ರಿ 9 ಗಂಟೆಗೆ ʼಮಜಾ ಟಾಕೀಸ್ʼ ಕಾರ್ಯಕ್ರಮಗಳು ಪ್ರೇಕ್ಷಕರನ್ನು ರಂಜಿಸಲಿವೆ.
ಹೊಸ ರೀತಿಯ ರಿಯಾಲಿಟಿ ಶೋಗಳಿಗೆ ಕಲರ್ಸ್ ಕನ್ನಡ ಶುರುಮಾಡುತ್ತಿರುವ ‘ಬಾಯ್ಸ್ v/s ಗರ್ಲ್ಸ್’ ಒಂದು ರೋಮಾಂಚಕ ಗೇಮ್ ಶೋ. ಹುಡುಗ ಮತ್ತು ಹುಡುಗಿಯರ ಗುಂಪುಗಳು ಜಿದ್ದಾಜಿದ್ದಿಗೆ ಬಿದ್ದು ನೋಡುಗರ ಬಿಸಿ ಏರಿಸುವ ಆಟದ ಶೋ ‘ಬಾಯ್ಸ್ ವರ್ಸಸ್ ಗರ್ಲ್ಸ್’ ಕನ್ನಡ ಕಿರುತೆರೆಗೆ ಹೊಸದೆನಿಸುವ ಥ್ರಿಲ್ ಅನ್ನು ಹೊತ್ತು ತರಲಿದೆ. ಬಾಯ್ಸ್ ತಂಡವನ್ನು ಬಿಗ್ ಬಾಸ್ ಖ್ಯಾತಿಯ ವಿನಯ್ ಗೌಡ ಮುನ್ನಡೆಸಿದರೆ, ಹುಡುಗಿಯರ ಗುಂಪಿನ ನಾಯಕಿ ನಟಿ ಶುಭಾ ಪೂಂಜಾ. ಇನ್ನು ಸ್ಪರ್ಧಿಗಳ ಪಟ್ಟಿಯೂ ಅಷ್ಟೇ ರೋಚಕವಾಗಿದೆ.
ಈಗಷ್ಟೇ ಬಿಗ್ ಬಾಸ್ ಗೆದ್ದಿರುವ ಹನುಮಂತ ಲಮಾಣಿ, ಬಿಗ್ ಬಾಸ್ ಮನೆಯಲ್ಲಿ ಗಮನ ಸೆಳೆಯುವಂತಹ ಆಟವಾಡಿದ ಧನರಾಜ್ ಆಚಾರ್, ಐಶ್ವರ್ಯಾ ಶಿಂದೊಗಿ, ಶೋಭಾ ಶೆಟ್ಟಿ, ಚೈತ್ರಾ ಕುಂದಾಪುರ ಮತ್ತು ರಜತ್ ಕೂಡ ಇಲ್ಲಿ ನಿಮಗೆ ಸಿಗುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.