ಕುಂದಾಪುರ (ಫೆ.01): ವಿದ್ಯಾರ್ಥಿಗಳಲ್ಲಿ ವಿಷಯದ ಬಗ್ಗೆ ಆಸಕ್ತಿ ಮತ್ತು ಆಳವಾದ ಚಿಂತನೆ ಇರಬೇಕು, ಕೇವಲ ಪರೀಕ್ಷೆಗಾಗಿ ಅಭ್ಯಾಸ ಮಾಡಬಾರದು. ಜ್ಞಾನಕ್ಕಾಗಿ ಓದಿದರೆ, ಜ್ಞಾಪಕ ಶಕ್ತಿ ಹೆಚ್ಚಾಗಿರುತ್ತದೆ ಎಂದು ಮೈಂಡ್ ಪವರ್ ಲರ್ನಿಂಗ್ ಸಂಸ್ಥೆಯ ಸ್ಥಾಪಕರು ಹಾಗೂ ನಿರ್ದೇಶಕರೂ ಆಗಿರುವ ಎಸ್. ಪ್ರಶಾಂತ್ ತಿಳಿಸಿದರು.
ಅವರು ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಆಯೋಜಿಸಿದ ಜ್ಞಾಪಕ ಶಕ್ತಿ ಹೇಗೆ ಹೆಚ್ಚಿಸಿಕೊಳ್ಳಬೇಕು ಎಂಬ ಕಾರ್ಯಾಗಾರದಲ್ಲಿ ತರಬೇತಿ ನೀಡಿದರು.
ಸಂಸ್ಥೆಯ ಉಪಪ್ರಾಂಶುಪಾಲೆ ಮತ್ತು ಪ್ರೌಢ ಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶುಭಾ ಕೆ. ಎನ್. ಕಾರ್ಯಕ್ರಮ ನಿರೂಪಿಸಿ ವಂದಿಸಿದರು.